ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು

17-09-Shiva-7
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಕ್ರಿಯಾ ಸಮಿತಿಯಿಂದ ಭಾನುವಾರ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಪ್ರಾಚಾರ್ಯ ಡಾ.ಯಂಕಣ್ಣ ಉದ್ಘಾಟಿಸಿದರು. ಸಾಹಿತಿ ವೀರಹನುಮಾನ, ಸಮಿತಿ ಗೌರವಾಧ್ಯಕ್ಷ ಎಚ್.ಎಚ್.ಮ್ಯಾದಾರ, ಅಧ್ಯಕ್ಷ ಬಷೀರ್ ಅಹ್ಮದ್ ಹೊಸಮನಿ, ಉಪನ್ಯಾಸಕರಾದ ಮಹಾದೇವಪ್ಪ, ಹನುಮಂತು ಕೋರಾಪುರ ಉಪಸ್ಥಿತರಿದ್ದರು.
Published on

ರಾಯಚೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಳ್ಳುವ ಮೂಲಕ ಓದು, ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಯಂಕಣ್ಣ ಹೇಳಿದರು.
ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಕ್ರಿಯಾ ಸಮಿತಿಯಿಂದ ಶನಿವಾರ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಡಿ, ಸಾಹಿತ್ಯದ ಓದಿನಿಂದ ಹೆಚ್ಚಿನ ಜ್ಞಾನ ಬೆಳೆಯುತ್ತದೆ ಎಂದರು.
ಕಥೆ, ಕವನ ಓದಿನ ಜತೆಗೆ ಬರವಣಿಗೆಯತ್ತ ಇಂದಿನ ಯುವ ಪೀಳಿಗೆಗೆ ಗಮನ ಹರಿಸಬೇಕು. ಜಿಲ್ಲೆಯಲ್ಲಿ ಇಂದು ಯುವ ಸಾಹಿತಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಸಾಹಿತ್ಯ ಕೃಷಿಯಲ್ಲಿ ತೊಡಗಬೇಕು ಎಂದು ಹೇಳಿದರು.
ಸಮಿತಿ ಗೌರವಾಧ್ಯಕ್ಷ ಎಚ್.ಎಚ್.ಮ್ಯಾದಾರ ಮಾತನಾಡಿ, ಸಮಿತಿ ಗಡಿನಾಡು ಕನ್ನಡಿರ ಸಮಸ್ಯೆಗಳ ನಿವಾರಣೆಗೆ ಹೋರಾಟ ನಡೆಸುವುದರ ಜತೆಗೆ ಜನರು ಮತ್ತು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ನೆಲದ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ವೀರಹನುಮಾನ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ರೀತಿಯಲಿ ಕವನ ರಚನೆ ಮಾಡಿದ್ದರೂ ಮತ್ತಷ್ಟು ಅಧ್ಯಯನದ ಅವಶ್ಯಕತೆಯಿದೆ. ನಮ್ಮ ಭಾಗದಲ್ಲಿ ಗಟ್ಟಿಯಾದ ಸಾಹಿತಿಗಳಿದ್ದು, ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಷೀರ್ ಅಹ್ಮದ್ ಹೊಸಮನಿ, ಪದಾಕಾರಿಗಳಾದ ರಾಮಣ್ಣ ಮ್ಯಾದರ, ರಫೀಕ್ ಅಹ್ಮದ್, ಶಂಷಾದ್ ಬೇಗಂ, ದೇವೇಂದ್ರಮ್ಮ, ಉಪನ್ಯಾಸಕರಾದ ಮಹಾದೇವಪ್ಪ, ಹನುಮಂತು ಕೋರಾಪುರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net