

ಮಾನ್ವಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಜಿಪಂ ಸಿಇಓ ರಾಹುಲï ತುಕಾರಂ ಪಾಂಡ್ವೆ ಅವರು ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಮಿತ್ತ ಪಟ್ಟಣದ ಆದರ್ಶ ವಿದ್ಯಾಲಯ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ವೆಲಂಕಿ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮಾತನಾಡಿದರು.
ನಂತರ ತಾಲೂಕಿನ ನೀರಮಾನ್ವಿಯ ಆದರ್ಶ ವಿದ್ಯಾಲಯ ಪರೀಕ್ಷೆ ಕೇಂದ್ರಕ್ಕೆ ಬೇಟಿ ನೀಡಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಮಾಹಿತಿ ಪಡೆದರು.
ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಗೆ ಸಿಸಿ ಕ್ಯಾಮರಾ ಅಳವಡಿಸಿ ಮುಖ್ಯ ಗುರುಗಳ ಕೋಣೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಿದ್ದು, ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವ ವ್ಯವಸ್ಥೆ ಪರಿಶೀಲಿಸಿದರು. ನಂತರ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಅಕ್ರಮಗಳು ನಡೆಯದಂತೆ ಎ¯್ಲÁ ಬಗೆಯ ಅಗತ್ಯ ಕ್ರಮಗಳನ್ನು ಕೈಗೊಂಡು ಪರಿಕ್ಷಾರ್ಥಿಗಳಿಗೆ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಕೇಂದ್ರಗಳ ಅಽÃಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಽÃಕ್ಷಕರು ಹಾಗೂ ಕರ್ತವ್ಯ ನಿರತ ಅಽಕಾರಿಗಳು ಹಾಗೂ ಸೇರಿದಂತೆ ಇತರೆ ಸಿಬ್ಬಂದಿಗಳು ಇದ್ದರು.