ವಿದ್ಯಾರ್ಥಿಗಳು ಜೀವನದಲ್ಲಿ ಛಲ ರೂಢಿಸಿಕೊಳ್ಳಬೇಕು

22-09-Shiva-1
ರಾಯಚೂರಿನ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಜಿಲ್ಲಾ ಸಹಕಾರ ಒಕ್ಕೂಟದಿಂದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯನ್ನು ಸಹಕಾರ ಸಂಘದ ಸಹಾಯಕ ನಿಬಂಧಕ ಶೇಖ್ ಹುಸೇನ್ ಉದ್ಘಾಟಿಸಿದರು. ಸಹಕಾರ ವಿಸ್ತೀರ್ಣಾಕಾರಿ ಅಮರೇಶ, ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಕಾರಿ ವೈ.ಗಾಯತ್ರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಅಮ್ಮಿನಬಾವಿ, ಸಹಕಾರ ಶಿಕ್ಷಕಿಯರಾದ ಕೆ.ಅಶ್ವಿನಿ, ಮಂಜುಳಾ, ಉಪನ್ಯಾಸಕಿ ಪಾರ್ವತಿ ಇದ್ದರು.
Published on

ರಾಯಚೂರು: ಸ್ಪರ್ಧೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಆದರೆ ವಿದ್ಯಾರ್ಥಿಗಳು ಸಾಸುವ ಮನೋಭಾವ ಹೊಂದಿದ್ದಾಗ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಸಹಕಾರ ಸಂಘಗಳ ಉಪ ನೋಂದಣಾಕಾರಿ ಕಚೇರಿಯ ಸಹಕಾರ ವಿಸ್ತೀರ್ಣಾಕಾರಿ ಅಮರೇಶ ಹೇಳಿದರು.
ಸ್ಥಳೀಯ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಮತ್ತು ಜಿಲ್ಲಾ ಸಹಕಾರ ಒಕ್ಕೂಟದಿಂದ ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗಾಗಿ ಗುರುವಾರ ಏರ್ಪಡಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿಷಯ ಸಂಗ್ರಹಣೆಗೆ ಅನುಕೂಲವಾಗಲಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು ಹೆಚ್ಚಿನ ವಿಷಯ ಸಂಗ್ರಹಣೆ ಮಾಡಿಕೊಂಡು ರಾಜ್ಯ ಮಟ್ಟದಲ್ಲಿ ಗೆಲುವು ಸಾಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಾಲಕರ ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಬೂದೆಪ್ಪ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಆತನದೇ ಆದ ಪ್ರತಿಭೆ ಇರುತ್ತದೆ. ಅದನ್ನು ಧೈರ್ಯದಿಂದ ಪ್ರದರ್ಶಿಸಲು ವಿದ್ಯಾರ್ಥಿಗಳು ಮುಂದಾಗಬೇಕು. ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕ ಶೇಖ್ ಹುಸೇನ್, ಉಪನ್ಯಾಸಕರಾದ ಗೋವರ್ಧನರೆಡ್ಡಿ, ವೆಂಕನಗೌಡ ಮಾತನಾಡಿದರು. ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಕಾರಿ ವೈ.ಗಾಯತ್ರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಅಮ್ಮಿನಬಾವಿ, ಸಹಕಾರ ಶಿಕ್ಷಕಿಯರಾದ ಕೆ.ಅಶ್ವಿನಿ, ಮಂಜುಳಾ, ಉಪನ್ಯಾಸಕಿ ಪಾರ್ವತಿ, ಶಿಕ್ಷಕರಾದ ಮೈನುಲ್‌ಹಕ್, ಚಂದ್ರಕಾಂತ, ಸ್ವರೂಪರಾಣಿ, ಚಂದೃಶೇಖರ ಕುದರಿಕಾರ, ಕವಿತಾ, ರೇಣುಕಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net