ವಿದ್ಯಾರ್ಥಿಗಳು ಕ್ಷಣಿಕ ಖುಷಿಗೆ ಮಾರು ಹೋಗಬಾರದು

madaka virodhi dina
madaka virodhi dina
Published on

ಕಾರ್ಕಳ: ಮಾದಕ ವ್ಯಸನಗಳಿಗೆ ದಾಸರಾಗದೆ ನಾವು ಉತ್ತಮ ಪ್ರಜೆಗಳಾಗಿ ಈ ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಬೇಕಾಗಿದೆ. ಕೆಟ್ಟ ಚಟಗಳಿಗೆ ಬಲಿಯಾಗಿ ನಾವು ನಮ್ಮ ಜೀವ ಹಾಗೂ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಎಚ್ಚರಿಕೆಯ ನಡೆಯನ್ನು ನಾವು ಹಿಡಿಯಬೇಕಾಗಿದೆ. ನಮ್ಮ ಒಂದು ಕ್ಷಣದ ಖುಷಿಗಾಗಿ ಜೀವನವಿಡೀ ಕೊರಗುವ ರೀತಿ ಸ್ಥಿತಿ ಎಂದೂ ನಿರ್ಮಾಣವಾಗಬಾರದು ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ಹೇಳಿದರು.

ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಇತ್ತೀಚೆಗೆ ನಡೆದ ಮಾದಕ ದ್ರವ್ಯಗಳು- ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸಂಸ್ಥೆಯ ಪ್ರಾಂಶುಪಾಲ ಹಾಗೂ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಪರಿಪಾಲಿಸಬೇಕು ಎಂದರು.

ನಗರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಸಂತೋಷ್, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಂತೋಷ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net