

ಮೈಸೂರು: ಪ್ರಸ್ತುತ ಸರ್ಕಾರಿ ಹುದ್ದೆಗಳನ್ನು ಪಡೆಂುಲು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ, ಸಮರ್ಪಕವಾಗಿ ಬಳಸಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ. ಶಿವಕುವಾರ್ ಹೇಳಿದರು.
ನಗರದ ಂುುವರಾಜ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಿಭಾಗ, ಅಕ್ಕ ಐಎಎಸ್ ಅಕಾಡೆಮಿ, ಭಾರತೀಯ ಸಂವಿಧಾನ ವಿಭಾಗದಿಂದ ಬುಧವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಕಾರ್ಯಾಗಾರ ಉದ್ಘಾಟಿಸಿ ಅವರು ವಾತನಾಡಿದರು.
ಸಮಯ ಎನ್ನುವುದು ಅಮೂಲ್ಯವಾದದ್ದು. ಅದನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯಾರ್ಥಿಗಳಿಗೆ ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡು ಜೀವನದದಲ್ಲಿ ಉನ್ನತ ಮಟ್ಟದ ಸಾಧನೆ ಮಾಡುವ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಈಗ ಎಲ್ಲ ಸರ್ಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ಭರ್ತಿ ಮಾಡಲಾಗುತ್ತಿದೆ. ಭರ್ತಿ ಮಾಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಪರಿಶ್ರಮದಿಂದ ವ್ಯಾಸಂಗ ಮಾಡಬೇಕು. ಪಿಯುಸಿ ಹಾಗೂ ಪದವಿ ಓದುವ ಸಮಯದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಗಮನ ಕೊಡುವುದರಿಂದ ಸಮಯವನ್ನು ಉಳಿಸಬಹುದಾಗಿದೆ.ಇದ್ದರಿಂದ ಜೀವನದಲ್ಲಿ ಬಹು ಬೇಗನೆ ಯಶಸ್ಸುನ್ನು ಪಡೆಯಬಹುದು ಎಂದರು.
ವಿದ್ಯಾರ್ಥಿಗಳು ಹೆಚ್ಚು ಸಮಯ ಮೊಬೈಲ್ ಹಾಗೂ ಮೋಜು ಮಸ್ತಿಯಲ್ಲಿ ಕಾಲಕಳೆಯುತ್ತಿದ್ದಾರೆ. ಪೋಷಕರು ಕನಸುಗಳನ್ನು ಕಟ್ಟಿಕೊಂಡು ಶಿಕ್ಷಣವನ್ನು ಮಕ್ಕಳಿಗೆ ಕೊಡಿಸುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪೋಷಕರ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು.
ಪ್ರತಿದಿನ 6 ರಿಂದ 8 ಘಂಟೆಗಳ ಕಾಲ ಅಭ್ಯಾಸದಲ್ಲಿ ತೋಡಗಿಕೊಳ್ಳಬೇಕು. ಪರೀಕ್ಷೆ ಸಮಯದಲ್ಲಿ ಓದುವ ವಿದ್ಯಾರ್ಥಿಗಳು ಹೆಚ್ಚು ಆದ್ದರಿಂದ ಪ್ರತಿದಿನ ಅಭ್ಯಾಸಮಾಡುವುದರಿಂದ ಬೇಗನೆ ಯಶಸ್ಸನ್ನು ಪಡೆಯಬಹುದು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪಾರ್ಶ್ವನಾಥ್ ಮಾತನಾಡಿ, ಪ್ರಸುತ್ತ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡು ಪದವಿ ವಿಷಯಕ್ಕೆ ಸೀಮಿತವಾಗಬಾರದು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಹೆಚ್ಚಿನ ಗಮನ ವಹಿಸಬೇಕು. ಒಂದು ವರ್ಷದಲ್ಲಿ 28 ವಿವಿಧ ಇಲಾಖೆಗಳ ಹುದ್ದೆಗಳಿಗೆ ಕೆಂದ್ರಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರತಿ ವರ್ಷ ಪರೀಕ್ಷೆಗಳು ನಡೆಯುತ್ತವೆ. ಈ ಹುದ್ದೆಗಳ ಬಗ್ಗೆ ವಿದ್ಯಾರ್ಥಿಗಳು ಸೂಕ್ತ ಮಾಹಿತಿ ತಿಳಿದುಕೊಂಡಿರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಏನು ಓದಬೇಕು ಎನ್ನುವುದಕ್ಕಿಂತ ಏನು ಓದಬಾರದು ಎನ್ನುವುದನ್ನು ತಿಳಿದುಕೊಳ್ಳಬೇಕು. ಇದರಿಂದ ಯಾವುದೇ ಪರೀಕ್ಷೆಗಳು ಕಠಿಣವಾಗುವುದಿಲ್ಲ ಎಂದರು.
ಪದವಿ ಹಂತಗಳಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ಮಾಡಿದರೆ ಬಹುಬೇಗನೆ ಸಾಧನೆ ಮಾಡಬಹುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಪದವಿ ಪಠ್ಯಗಳ ಜೊತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯಗಳನ್ನು ಓದುವುದನ್ನು ಅಭ್ಯಾಸ ಮಾಡಬೇಕು ಎಂದರು.
ಂುುವರಾಜ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಮಹಾದೇವ ಮೂರ್ತಿ, ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಡಾ.ಎಂ.ಕೆ. ಗಿರೀಶ್ ಚಂದ್ರ, ಪ್ರಾಧ್ಯಾಪಕ ಡಾ.ಎಸ್.ಮಂಜುಳಾ, ಪ್ರೊ.ಕೆ.ಅಜಯ್ ಕುಮಾರ್, ಪ್ರೊ.ಸಿ.ನಾಗೇಶ್, ಸುಶ್ಮಿತಾ ಇತರರು ಇದ್ದರು.