

ಹೊನ್ನಾವರ: ವಿದ್ಯಾರ್ಥಿಗಳ ಏಳಿಗೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯವಾದುದು. ವಿದ್ಯಾರ್ಥಿಗಳು ಅತಿಯಾದ ಟಿವಿ ವೀಕ್ಷಣೆ ಮತ್ತು ಮೊಬೈಲ್ ಫೋನ್ ಬಳಕೆಯಿಂದ ದೂರವಿದ್ದು, ವಿದ್ಯಾಭ್ಯಾಸದ ಕಡೆಗೆ ಗಮನ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಜಿ. ನಾಯ್ಕ ಹೇಳಿದರು.
ತಾಲೂಕಿನ ಬೇರಂಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ನಾಯ್ಕ ಶಾಲೆ ವಿದ್ಯಾರ್ಥಿಗಳ ‘ಝೇಂಕಾರ’ ಹಸ್ತಪತ್ರಿಕೆ ಬಿಡುಗಡೆಗೊಳಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಾಲೆಯ ಶಿಕ್ಷಕ ಎಂ.ಡಿ. ಹರಿಕಾಂತ ಅವರಿಗೆ ಯಕ್ಷಗಾನ ಕಿರೀಟ ನೀಡಿ ಸನ್ಮಾನಿಸಲಾಯಿತು.
ಗ್ರಾಪಂ ಅಧ್ಯಕ್ಷ ತಿಮ್ಮಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪ್ರಕಾಶ ನಾಯ್ಕ, ಕಸಾಪ ಅಧ್ಯಕ್ಷ ಎಸ್.ಎಚ್. ಗೌಡ ಮಾತನಾಡಿದರು. ಗ್ರಾಪಂ ಸದಸ್ಯರಾದ ಜಯಂತ ನಾಯ್ಕ, ಶೋಭಾ ಜಟ್ಟಿ ನಾಯ್ಕ, ಸಿಆರ್ಪಿ ಲಾವಣ್ಯ ಖಾರ್ವಿ, ಎಸ್ಡಿಎಂಸಿ ಅಧ್ಯಕ್ಷ ಶ್ರೀಕಾಂತ ನಾಯ್ಕ, ಉಪಾಧ್ಯಕ್ಷೆ ರೇಷ್ಮಾ ಗೌಡ ಉಪಸ್ಥಿತರಿದ್ದರು. ಮುಖ್ಯಾಧ್ಯಾಪಕ ಆರ್.ಎನ್. ಹೆಗಡೆ ಸ್ವಾಗತಿಸಿದರು. ಎಂ.ಡಿ. ಹರಿಕಾಂತ ವಂದಿಸಿದರು.