ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಲಿ

IMG_20250602_172905
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೋಹನ್ ಕುಮಾರ್ ಪಠ್ಯಪುಸ್ತಕ ವಿತರಿಸಿದರು. ಹಿರೇಮಠ, ಮಲ್ಲೇಶ್, ಸತೀಶ್ ಇದ್ದರು.
Published on

ಅರಸೀಕೆರೆ : ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು ಪಾಲಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ವರ್ಷ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಶೇ.85ರಷ್ಟು ಪಠ್ಯಪುಸ್ತಕಗಳ ಜತೆಗೆ ಸಮವಸ್ತ್ರ ವಿತರಿಸಲಾಗಿದೆ ಎಂದರು.

9ನೇ ತರಗತಿಯಿಂದ ಕಂಪ್ಯೂಟರ್ ಶಿಕ್ಷಣ ಸಹ ಪ್ರಾರಂಭಗೊಂಡು ಇನ್ಫಾರ್ಮೇಶನ್ ಆಂಡ್ ಟೆಲಿಕಮ್ಯುನಿಕೇಷನ್ ಕೋರ್ಸ್ ಸಹ ಶಿಕ್ಷಣದೊಂದಿಗೆ ಉಚಿತವಾಗಿ ಪಡೆಯಬಹುದಾಗಿದೆ. ಪಿಯುಸಿಯಲ್ಲಿಯೂ ಮುಂದುವರಿಸಬಹುದಾಗಿದ್ದು ಉದ್ಯೋಗಕ್ಕೆ ಸಹಕಾರಿಯಾಗುತ್ತದೆ. ಎಲ್ಲ ಸೌಲಭ್ಯಗಳು ಇರುವ ಶಾಲೆಗೆ ಮಕ್ಕಳನ್ನು ದಾಖಲಿಸಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು. ಶಾಲೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಕಾಳಜಿ ವಹಿಸಲಾಗುತ್ತದೆ. ಇಲ್ಲಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿನಿಯರು ಶಿಕ್ಷಣದೊಂದಿಗೆ ಬ್ಯೂಟಿಷಿಯನ್ ಮತ್ತು ಕಂಪ್ಯೂಟರ್ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಂಡಿರುವ ಉದಾಹರಣೆಗಳಿವೆ ಎಂದರು.

ಶಾಲಾ ಉಪ ಪ್ರಾಂಶುಪಾಲ ಜಗದೀಶ್ ಹಿರೇಮಠ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿನಿಯರು, ಗುಣಮಟ್ಟದ ಶಿಕ್ಷಣ ನೀಡಲಾಗಿದೆ. ಅನುಭವಿ ಹಾಗೂ ನುರಿತ ಅಧ್ಯಾಪಕರಿದ್ದು ಯಾವುದಕ್ಕೂ ಕೊರತೆಯಿಲ್ಲ. ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ,ಬಿಸಿಯೂಟ ಸೇರಿದಂತೆ ಇತರ ಸೌಲಭ್ಯಗಳಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಹ ಉತ್ತಮ ಫಲಿತಾಂಶವನ್ನು ನಮ್ಮ ಶಾಲೆ ನೀಡುತ್ತಾ ಬಂದಿದೆ ಎಂದರು.

ಶಿಕ್ಷಣ ಸಂಯೋಜಕರಾದ ಮಲ್ಲೇಶ್, ಸತೀಶ್, ಹಾಗೂ ಶಾಲಾ ಶಿಕ್ಷಕ ವರ್ಗ, ಪಾಲಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net