ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ
Published on

ಯಳಂದೂರು: ವಿದ್ಯಾರ್ಥಿಗಳು ಇತ್ತೀಚೆಗೆ ದುಶ್ವಟಗಳಿಗೆ ಹೆಚ್ಚು ಬಲಿಯಾಗುತ್ತಿದ್ದು, ಇದೊಂದು ಸಮೂಹ ಸನ್ನಿಯಾಗಿ ಮಾರ್ಪಾಡಾಗುತ್ತಿದೆ ಈ ಬಗ್ಗೆ ಎಚ್ಚರ ವಹಿಸಬೇಕೆಂದು ವಿದ್ವತ್ ಇನ್‌ಫ್ರಾ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕ ಸೋಮಶೇಖರ್ ನಾಯಕ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶನಿವಾರ ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಹಮ್ಮಿಕೊಂಡಿದ್ದ ಬೀಳ್ಕೂಡುಗೆ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಓದುವಾಗ ಮನಸ್ಸು ವಿಚಲಿತವಾಗಬಾರದು. ಓದು ನಮ್ಮ ಭವಿಷ್ಯವನ್ನು ರೂಪಿಸುವ ಸಾಧನವಾಗಿದೆ. ಇದನ್ನು ಪೂರ್ಣಗೊಳಿಸದೆ ನಾವು ಬೇರೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬಾರದು. ಮೊಬೈಲ್‌ಗಳು, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮಾಡಿಕೊಳ್ಳಬಾರದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಎಸ್‌ಡಿವಿಎಸ್ ವಿದ್ಯಾಸಂಸ್ಥೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು, ಇನ್ನಷ್ಟು ಉತ್ತಮ ವಿದ್ಯಾರ್ಥಿಗಳು ಇಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಲಿ. ನಮ್ಮ ಸಂಸ್ಥೆಯ ವತಿಯಿಂದ ಪ್ರತಿ ವರ್ಷವೂ ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕಗಳಿಸಿದ ಶಾಲೆಯ 5 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಅಲ್ಲದೆ ಪಟ್ಟಣದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ನಾವು ಭಾಗವಹಿಸಲಿದ್ದೇವೆ ಎಂದರು.

ಶಾಲೆಯ ಹಿರಿಯ ವಿದ್ಯಾರ್ಥಿನಿ ಡಾ.ಪಿ.ಸ್ಫೂರ್ತಿ ಮಾತನಾಡಿ, ನಾನು ಎಂಬಿಬಿಎಸ್ ಮುಗಿಸಿ ಎಂ.ಎಸ್. ಮಾಡುತ್ತಿರುವುದಕ್ಕೆ ಈ ಶಾಲೆಯಲ್ಲಿ ಹಾಕಿಕೊಟ್ಟ ಶಿಕ್ಷಣದ ಅಡಿಪಾಯವೇ ಸ್ಫೂರ್ತಿಯಾಗಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಪಾಲಕರೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಪಾಲಕರ ನಿರ್ದೇಶನಗಳನ್ನು ಪಾಲಿಸಬೇಕು. ತಮ್ಮ ಕಲಿಕೆಯಲ್ಲಿ ನಿರಂತರತೆಯನ್ನು ಕಾಪಾಡಿಕೊಳ್ಳಬೇಕು. ನಾವು ಕಲಿತು, ಕೆಲಸ ಪಡೆದು ನಮ್ಮ ಪಾಲಕರಿಗೆ ನೆರವಾಗಬೇಕು. ಇದು ನಮ್ಮ ಧ್ಯೇಯವಾಗಬೇಕು ಎಂದು ಸಲಹೆ ನೀಡಿದರು.

ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಮಲ್ಲಿಕಾರ್ಜುನಸ್ವಾಮಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಎಲ್.ಪೂಜಾಶ್ರೀ, ಸಂಸ್ಥಾಪಕ ಪಿ. ವೀರಭದ್ರಪ್ಪ ಮಾತನಾಡಿದರು. ಶಾಲೆಯ ಎಂ.ವಿಖ್ಯಾತ್, ಮುಖ್ಯ ಶಿಕ್ಷಕ ವೀರಭದ್ರಸ್ವಾಮಿ ಗುಂಬಳ್ಳಿ ಬಸವರಾಜು, ಮಹಾದೇವ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net