ಶ್ವಾನವನ್ನೇ ಸಹೋದರನೆಂದು ಭಾವಿಸಿ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

yadagiri
Published on

ಯಾದಗಿರಿ: ಶ್ವಾನವನ್ನೇ ಸಹೋದರನೆಂದು ಭಾವಿಸಿ ರಾಖಿ ಕಟ್ಟಿ, ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಹಬ್ಬ ಆಚರಿಸಿದ ಅಪರೂಪದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿ ದಿವ್ಯ ಹಾಗೂ ಸಂಗಡಿಗರು ಶಾಲೆಯ ಮುಖ್ಯ ಶಿಕ್ಷಕ ಸುರೇಶ ಕರಣಿ ಎನ್ನುವವರ ನೆಚ್ಚಿನ ಶ್ವಾನ ಜಾನಿ ಬಲಗಾಲಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಮಾನವೀಯ ಮೌಲ್ಯ ಎತ್ತಿ ಹಿಡಿದಿರುವುದು ಈ ಘಟನೆಯಿಂದ ತಿಳಿದುಬರುತ್ತದೆ.

ಮೊನ್ನೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳಿದ್ದರೂ ಅವರ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಾಡಿದ್ದರು. ವಿದೇಶದಲ್ಲಿ ನೆಲೆಸಿದ್ದ ಸ್ವಂತ ಮಕ್ಕಳು ತಂದೆ ಅಂತ್ಯ ಸಂಸ್ಕಾರಕ್ಕೆ ಬಾರದೆ ಇರುವ ಅಮಾನವೀಯ ಘಟನೆ ನಡೆದಿತ್ತು. ಇದೀಗ ಶ್ವಾನಕ್ಕೆ ರಾಖಿ ಕಟ್ಟುವ ಮೂಲಕ ವಿದ್ಯಾರ್ಥಿನಿಯರು ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net