ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು

ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು
Published on

ಆಲೂರು: ತಾಲೂಕಿನ ಚಿಕ್ಕಕಣಗಾಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೇಸಿಗೆ ರಜೆ ಮುಗಿಸಿ ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದರು.

ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಹೂವುಗಳಿಂದ ಸಿಂಗಾರಗೊಳಿಸಿ ಹಬ್ಬದ ರೀತಿಯಲ್ಲಿ ತರಗತಿ ಪ್ರಾರಂಭೋತ್ಸವ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಗುಲಾಬಿ, ಸಿಹಿ ನೀಡಿ ಶಿಕ್ಷಕರು ಸ್ವಾಗತಿಸಿದರು.

ಶಾಲೆಗಳಲ್ಲಿ ಸಿಹಿಯೂಟ ಸಿದ್ಧಪಡಿಸಿದ್ದು, ವಿದ್ಯಾರ್ಥಿಗಳು ಸಂಭ್ರಮದಿಂದ ಸವಿದರು. ಚಿಕ್ಕಕಣಗಾಲು ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲೆಯಲ್ಲಿ ದಾಖಲಾತಿ ಆಂದೋಲನ ದಿನ ಕೂಡ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಎಚ್.ಎನ್. ಶೈಲಜಾ, ಶಿಕ್ಷಕ ಕೆ.ಆರ್ ರಘು, ಭವಾನಿ, ಸುಮಿತ್ರಾ, ನಾಗರಾಜ್, ಎಸ್‌ಡಿಎಂಸಿ ಸದಸ್ಯ ಆನಂದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net