ಸಮಾಜದೊಂದಿಗೆ ಬೆರೆತಾಗ ನಾಯಕತ್ವ ಗುಣ : ಪ್ರಭಾಕರ ಪ್ರಭು ಅಭಿಪ್ರಾಯ

siddakatte
ಸಿದ್ದಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘಗಳನ್ನು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ವಿದ್ಯಾರ್ಥಿಗಳು ಶಾಲಾ ಶಿಕ್ಷಣದ ಜತೆಗೆ ಸಂಸ್ಕಾರಭರಿತವಾದ ಶಿಕ್ಷಣವನ್ನು ಅಳವಡಿಸಿಕೊಂಡು, ಗುರು-ಹಿರಿಯರಿಗೆ ವಿಧೇಯರಾಗಿ, ತಾಳ್ಮೆಯಿಂದ ಸಮಾಜದೊಂದಿಗೆ ಬೆರೆತಾಗ ನಾಯಕತ್ವ ಗುಣ ಬೆಳೆಯಲು ಸಾಧ್ಯವಾಗುತ್ತದೆ ಎಂದು ಸಿದ್ದಕಟ್ಟೆ ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯಪಟ್ಟರು.

ಸಿದ್ದಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಇತರ ಸಂಘಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಯಾವುದೇ ವಿಷಯದಲ್ಲಿ ಆಗಲಿ ಆಸಕ್ತಿ ಇದ್ದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಆಸಕ್ತಿಯಿಂದ ಅಧ್ಯಯನ ಮಾಡಿದ್ದಲ್ಲಿ ತಾವು ತೆಗೆದುಕೊಂಡ ವಿಷಯದಲ್ಲಿ ಉನ್ನತ ಮಟ್ಟಕ್ಕೆ ಏರಬಹುದು ಮತ್ತು ಸಾಧನೆ ಮಾಡಬಹುದು ಎಂದರು.

ಪ್ರಾಂಶುಪಾಲ ಉದಯಕುಮಾರ್ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶೀನಪ್ಪ ಎನ್.ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕ ಶ್ರೀನಿವಾಸ ನಾಯ್ಕ ಸ್ವಾಗತಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ರೇಖಾ ಬಾಳಿಗಾ ಬಿ.ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಘದ ನಾಯಕ ಲತೀಶ್ ವಂದಿಸಿದರು. ಕನ್ನಡ ಉಪನ್ಯಾಸಕ ಸಂಜಯ್ ಬಿ.ಎಸ್.ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net