ಪರಸ್ಪರ ಅಂತರ ಕಾಯ್ದುಕೊಳ್ಳದ ವಿದ್ಯಾರ್ಥಿಗಳು

18ss2
Published on

ಶನಿವಾರಸಂತೆ: ಪರಸ್ಪರ ಅಂತರ ಕಾಯ್ದುಕೊಳ್ಳದೆ ವಿದಾರ್ಥಿಗಳು ಗುಂಪು ಗುಂಪಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದ ದೃಶ್ಯ ಇಲ್ಲಿನ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಂಡು ಬಂತು.

ಹೋಬಳಿ ವ್ಯಾಪ್ತಿಯಲ್ಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಸೆಂಟರ್ ಆಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿ ಕಂಡು ಬಂತು. ಅಲ್ಲದೆ ಕೆಲವರು ಮಾಸ್ಕ್ ಧರಿಸದೆ ಬಂದಿದ್ದರು.

ಇದನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಪರೀಕ್ಷಾ ಸೆಂಟರ್‌ಗೆ ಆಗಮಿಸಿ ಪರಿಶೀಲಿಸಿದರು. ಪರಸ್ಪರ ಕಾಯ್ದುಕೊಂಡು ಪರೀಕ್ಷೆ ಬರೆಯುವ ಕೊಠಡಿಗೆ ತೆರಳುವಂತೆ ಸೂಚಿಸಿದರು. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಕರವಸ್ತ್ರ ಧರಿಸುವಂತೆ ಸೂಚಿಸಿದರು. ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net