ಚಿನ್ನ, ಬೆಳ್ಳಿ ಗೆದ್ದ ವಿದ್ಯಾರ್ಥಿಗಳು

tecwando
Published on

ಮಡಿಕೇರಿ: ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಬಸವೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ.


ಕೇಂದ್ರೀಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿ ಎಂ.ವೈ.ಗೌರವ್ ೨ ಚಿನ್ನ, ೧ನೇ ತರಗತಿ ವಿದ್ಯಾರ್ಥಿ ಎಂ.ವೈ.ಚುನೇಹ, ೫ನೇ ತರಗತಿ ವಿದ್ಯಾರ್ಥಿ ದೃಪದ್ ಪಿ.ಮನಿಕೊತ್, ೪ನೇ ತರಗತಿ ವಿದ್ಯಾರ್ಥಿ ಐಡೆನ್ ಜೆ.ತರಕಾನ್, ೬ನೇ ತರಗತಿ ವಿದ್ಯಾರ್ಥಿ ಗುತ್ತಿಮುಂಡನ ಸಮರ್ಥ್, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ೩ನೇ ತರಗತಿ ವಿದ್ಯಾರ್ಥಿ ತೇಜಸ್ ರಾಜು ವಿ. ತಲಾ ೧ ಚಿನ್ನ ಹಾಗೂ ೧ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ.


ಕೂರ್ಗ್ ಟೆಕ್ವಾಂಡೊ ತರಬೇತಿ ಸಂಸ್ಥೆಯ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net