

ವಿಜಯವಾಣಿ ಸುದ್ದಿಜಾಲ ಧಾರವಾಡ
ಪರಿಣಾಮಕಾರಿ ಬೋಧನೆಯು ವಿದ್ಯಾರ್ಥಿಗಳನ್ನು ಪರಿವರ್ತಿಸಿ ಪ್ರಬುದ್ಧಗೊಳಿಸುತ್ತದೆ. ಬೋಧಕರು ಬೋಧನೆಯನ್ನು ಆಸಕ್ತಿದಾಯಕ ಮತ್ತು ಸಂವಾದಾತ್ಮಕವಾಗಿ ಮಾಡುವ ಅನಿವಾರ್ಯತೆ ಇದೆ. ಹೊಸ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸುವುದು ಶಿಕ್ಷಣದ ಈಗಿನ ಪ್ರಾಶಸ್ತ್ಯವಾಗಿದೆ ಎಂದು ಎಸ್‌ಡಿಎಂ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ ಹೇಳಿದರು.
ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಘಟಕವು ಬೆಳಗಾವಿಯ ಜೆಎನ್‌ಎಂಸಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ಪ್ರಾಂತೀಯ ನೋಡಲ್ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ `ವೈದ್ಯಕೀಯ ಶಿಕ್ಷಣದಲ್ಲಿ ಅಧ್ಯಯನ' ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಠಿಣ ತರಬೇತಿಯಿಂದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣವನ್ನು ಸರಳಗೊಳಿಸಬಹುದು. ದೃಢ ನಿರ್ಧಾರ, ದಿಟ್ಟತನ ಮತ್ತು ಭಯಮುಕ್ತರಾಗಿ ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂದರು.
ಎಸ್‌ಡಿಎA ವೆÀದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ರತ್ನಮಾಲಾ ಎಂ. ದೇಸಾಯಿ, ಆಡಳಿತ ನಿರ್ದೇಶಕ ಸಾಕೇತ್ ಶೆಟ್ಟಿ, ಕುಲಸಚಿವ ಡಾ. ಚಿದೇಂದ್ರ ಶೆಟ್ಟರ, ಜೆಎನ್‌ಎಂಸಿಯ ಪ್ರಾಂತೀಯ ನೋಡಲ್ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ ನಾಗಮೋತಿ, ಇತರರು ಉಪಸ್ಥಿತರಿದ್ದರು.
ಔಷಧಗುಣ ಶಾಸ್ತçದ ಪ್ರಾಧ್ಯಾಪಕಿ ಡಾ. ರಾಧಿಕಾ ಶೇರ್ಖಾನೆ ಪರಿಚಯಿಸಿದರು. ಡಾ. ರತ್ನಮಾಲಾ ದೇಸಾಯಿ ಸ್ವಾಗತಿಸಿದರು. ಡಾ. ಆದಿತ್ಯಾ ಅಗ್ನಿಹೋತ್ರಿ ನಿರೂಪಿಸಿದರು. ಡಾ. ರಾಕೇಶ ನಾಯಕ ವಂದಿಸಿದರು.