

ಹೊಸದುರ್ಗ: ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಹೆಚ್ಚಿನ ಮಹತ್ವ ನೀಡಿದರೆ ಬದುಕು ಸುಂದರವಾಗಿರುತ್ತದೆ ಎಂದು ತಿಳಿಸಿದರು.
ಪಟ್ಟಣದ ಕಸ್ತೂರಬಾ ಸರ್ಕಾರಿ ಬಾಲಕಿಯರ ವಸತಿ ಶಾಲೆಯಲ್ಲಿ ಗುರುವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಲಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಲಿಕೆ ನಿರಂತರವಾದ ಪ್ರಕ್ರಿಯೆ. ಅಧ್ಯಯನಶೀಲರು ಮಾತ್ರ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯ ಎನ್ನುವುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಹೆಣ್ಣುಮಕ್ಕಳ ಶೈಕ್ಷಣಿಕ ಪ್ರಗತಿಗೆ ವಸತಿ ಶಾಲೆಯಲ್ಲಿ ಸರ್ಕಾರ ಎಲ್ಲ ಸೌಲಭ್ಯಗಳನ್ನೂ ಒದಗಿಸಿದೆ. ಇದರ ಪ್ರಯೋಜನ ಪಡೆದು ಸಾಧನೆ ಮಾಡಿ ತೋರಿಸಬೇಕು ಎಂದು ತಿಳಿಸಿದರು.
ಮಹಿಳೆಯರ ಆರ್ಥಿಕ ಸಭಲೀಕರಣಕ್ಕೆ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರೂಪಿಸಿದೆ. ವಸತಿ ಶಾಲೆಯಲ್ಲಿ ಪ್ರತಿದಿನ ಬೆಳಗ್ಗೆ ಹಾಗೂ ಪಾಠ ಹೇಳಿಕೊಡುವ ಕೆಲಸವನ್ನು ಸಂಸ್ಥೆ ಮಾಡಿದೆ. ಇದಕ್ಕಾಗಿ ಶಿಕ್ಷಕರನ್ನು ನೇಮಿಸಿ ವೇತನ ನೀಡುತ್ತಿದೆ ಎಂದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಡಿ. ಶಿವಣ್ಣ ಮಾತನಾಡಿ, ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಬಲಪಡಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ವಿಶೇಷ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು.