ಶ್ರೀರಾಮಕೃಷ್ಣರ ಜೀವನ ಚರಿತ್ರೆ ಅಧ್ಯಯನ ಮಾಡಿ: ರಾಜ್ಯಪಾಲ ಸಿ.ಎಚ್.ವಿಜಯ್ ಶಂಕರ್ ಸಲಹೆ

18 A
Published on

ಮೈಸೂರು: ನಗರದ ಯಾದವಗಿರಿಯಲ್ಲಿರುವ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯ್ ಶಂಕರ್ ಗೋಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ರಾಜ್ಯಪಾಲರು, ಭಾರತೀಯ ಸಂಸ್ಕೃತಿ, ಪರಂಪರೆ, ಧಾರ್ಮಿಕತೆಗಾಗಿ ಅನೇಕ ವರ್ಷಗಳಿಂದ ಶ್ರಮಿಸುತ್ತಿರುವ ಶ್ರೀರಾಮಕೃಷ್ಣ ಆಶ್ರಮದ ಸಾಧನೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಷ್ಟ್ರಕವಿ ಕುವೆಂಪು ವಿರಚಿತ ಶ್ರೀರಾಮಕೃಷ್ಣರ ಜೀವನ ಚರಿತ್ರೆಯನ್ನು, ವಿವೇಕಾನಂದರ ಜೀವನ ಚರಿತ್ರೆಯನ್ನು ಓದಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಈ ಎರಡು ಕೃತಿಗಳನ್ನು ಓದಿದರೆ ದೇಶದ ಬಗ್ಗೆ, ನಮ್ಮ ಪರಂಪರೆಯ ಮಹತ್ವದ ದರ್ಶನವಾಗುತ್ತದೆ ಎಂದು ತಿಳಿಸಿದರು.
ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಸಂಯೋಜಕರಾದ ಸ್ವಾಮಿ ಯುಕ್ತೇಶಾನಂದಜೀ, ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಪ್ರಾಂಶುಪಾಲ ಟಿ.ಕೆ.ಚಂದ್ರಶೇಖರ್, ವಿದ್ಯಾಶಾಲೆಯ ಬೋಧಕ ,ಬೋಧಕೇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net