ವಸತಿ ಶಾಲೆ ಪರೀಲಿಸಿದ ಉಪವಿಭಾಗಾಧಿಕಾರಿ

30BTP002
ಬೆಟ್ಟದಪುರದಲ್ಲಿ ಇರುವ ಹಲಗನಹಳ್ಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಗಳವಾರ ಹುಣಸೂರು ಉಪವಿಭಾಗಾಧಿಕಾರಿ ಮೊಹಮ್ಮದ್ ಹಾರಿಸ್ ಸುಮೈರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಉಪತಹಸೀಲ್ದಾರ್ ಶಶಿಧರ್, ಗ್ರಾಮ ಲೆಕ್ಕಾಧಿಕಾರಿ ಗುರು ಸೇರಿದಂತೆ ಶಾಲಾ ಶಿಕ್ಷಕರು ಇದ್ದರು.
Published on

ಬೆಟ್ಟದಪುರ: ಬೆಟ್ಟದಪುರದಲ್ಲಿ ಇರುವ ಹಲಗನಹಳ್ಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಂಗಳವಾರ ಹುಣಸೂರು ಉಪವಿಭಾಗಾಧಿಕಾರಿ ಮೊಹಮ್ಮದ್ ಹಾರಿಸ್ ಸುಮೈರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಯ ಎಲ್ಲ ತರಗತಿಗಳಿಗೆ ಭೇಟಿ ನೀಡಿ, ಮಕ್ಕಳ ವಿದ್ಯಾಭ್ಯಾಸ, ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಮಕ್ಕಳೊಂದಿಗೆ ಸಂವಾದ ನಡೆಸಿ, ಓದಿನ ಬಗ್ಗೆ ಹೆಚ್ಚಿನ ಆಸಕ್ತಿವಹಿಸುವಂತೆ ಕಿವಿಮಾತು ಹೇಳಿದರು. ಬಳಿಕ ಶಾಲೆಯ ಅಡುಗೆ ಮನೆಗೆ ಭೇಟಿ ನೀಡಿ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಶಾಲೆಯಲ್ಲೇ ಊಟ ಮಾಡಿದರು.

ಉಪತಹಸೀಲ್ದಾರ್ ಶಶಿಧರ್, ಗ್ರಾಮ ಲೆಕ್ಕಾಧಿಕಾರಿ ಗುರು ಸೇರಿದಂತೆ ಶಾಲಾ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net