17ರಿಂದ ಹೊರಗುತ್ತಿಗೆ ನೌಕರರ ಪ್ರತಿಭಟನೆ

Published on

ಹುಬ್ಬಳ್ಳಿ: ಜಿಲ್ಲಾ ನೋಂದಣಿ ಹಾಗೂ ಉಪನೋಂದಣಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕಂಪ್ಯೂಟರ್ ಆಪರೇಟರ್ ಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಫೆ. 17ರಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆಯಾ ಜಿಲ್ಲೆಯ ಜಿಲ್ಲಾ ನೋಂದಣಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ (ಕಾವೇರಿ ಯೋಜನೆ) ಹೊರಗುತ್ತಿಗೆ ಕಂಪ್ಯೂಟರ್ ಆಪರೇಟರ್ ಗಳ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು.

ಈಗಾಗಲೇ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು, ಗುತ್ತಿಗೆ ಪಡೆದ ಸಿಎಂಎಸ್ ಕಂಪನಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಸಚಿವರಿಗೂ ಮನವಿ ಮಾಡಲಾಗಿದೆ. ಆದರೆ, ಇಲ್ಲಿಯವರೆಗೂ ಸರ್ಕಾರ, ಇಲಾಖೆಯ ಮುಖ್ಯಸ್ಥರು, ಕಂಪನಿಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ ಫೆ. 15ರೊಳಗಾಗಿ ಬೇಡಿಕೆ ಈಡೇರಿಸದೇ ಹೋದಲ್ಲಿ ಫೆ. 17ರಿಂದ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net