ಸೋಲೆ ಗೆಲುವಿಗೆ ಪ್ರಥಮ ಅಡಿಪಾಯ : ಧರ್ಮಗುರು ಸಿಪ್ರಿಯನ್ ಪಿಂಟೋ ಅನಿಸಿಕೆ

New Project (25)
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಸೋಲೆ ಗೆಲುವಿಗೆ ಅಡಿಪಾಯವಾಗಿದ್ದು, ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಮಕ್ಕಳು ಎಳವೆಯಲ್ಲೇ ಮೈಗೂಡಿಸಿಕೊಳ್ಳಬೇಕು ಎಂದು ಸಂತ ಸೆಬಾಸ್ಟಿಯನ್ ಧರ್ಮ ಕೇಂದ್ರದ ಧರ್ಮಗುರು ಸಿಪ್ರಿಯನ್ ಪಿಂಟೋ ಅಭಿಪ್ರಾಯಪಟ್ಟರು.

ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಮಂಗಳೂರು ಹೋಬಳಿಮಟ್ಟದ 14 ವರ್ಷ ವಯೋಮಿತಿ ಒಳಗಿನ ಬಾಲಕ-ಬಾಲಕಿಯರ ಖೋ-ಖೋ ಮತ್ತು ವಾಲಿಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ತ್ಯಾಗಮ್ ಹರೇಕಳ ಮಾತನಾಡಿ, ಕರೋನ ಅವಧಿ ನಂತರದ ಮಕ್ಕಳು ಮೊಬೈಲ್ ದಾಸರಾಗಿದ್ದು, ಬಹುತೇಕ ಮಕ್ಕಳಲ್ಲಿ ಸದೃಢ ಆರೋಗ್ಯದ ಕೊರತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ಯು.ಪಿ.ಅಯೂಬ್ ಮಂಚಿಲ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ಸಂತ ಸೆಬಾಸ್ಟಿಯನ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ಜ್ಯೋತಿ ಡಿಸೋಜ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಜಾನೆಟ್ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ನಿತಿನ್, ಲತಾ ಮೊದಲಾದವರು ಉಪಸ್ಥಿತರಿದ್ದರು. ಜ್ಯೋತಿಕಾ ಸ್ವಾಗತಿಸಿದರು. ರೀನಾ ಜೋಸೆಫ್ ಡಿಸೋಜ ವಂದಿಸಿದರು. ಜಯಶ್ರೀ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net