

ಸಕಲೇಶಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಲೂಕು ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್ ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನೀಡಿರುವ ಆದೇಶವನ್ನು ಜಾರಿಗೊಳಿಸುವಂತೆ ಶನಿವಾರ ಮನವಿ ಸಲ್ಲಿಸಿದರು.
ಭಾರಿ ಮಳೆಯಿಂದ ಸಕಲೇಶಪುರದಲ್ಲಿ ಉಂಟಾಗಿರುವ ಭೂ ಕುಸಿತ ವೀಕ್ಷಿಸಲು ತೆರಳುವಾಗ ಮಾರ್ಗಮಧ್ಯೆದಲ್ಲಿ ಹೊಳೆನರಸೀಪುರದಲ್ಲಿ ಶ್ರೇಯಸ್ ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ದಂಡೋರ ಸಮಿತಿಯ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದನೆ ನೀಡಿ, ತೀರ್ಪನ್ನು ನಾವು ಗೌರವಿಸುತ್ತೇವೆ. ಶೀಘ್ರದಲ್ಲೇ ಈ ವಿಚಾರ ಪರಾಮರ್ಶಿಸಿ ಜಾರಿಗೊಳಿಸುವುದಾಗಿ ಭರವಸೆ ನೀಡಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸಂಸದ ಶ್ರೇಯಸ್ ಎಂ. ಪಟೇಲ್ ಇದ್ದರು.