ಐವರಿಂದ ಏಳು ನಾಮಪತ್ರ ಸಲ್ಲಿಕೆ

18-04-Shiva-2
ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜಾ ಅಮರೇಶ್ವರ ನಾಯಕ ಗುರುವಾರ ಚುನಾವಣಾಕಾರಿ ಚಂದ್ರಶೇಖರ ನಾಯಕಗೆ ನಾಮಪತ್ರ ಸಲ್ಲಿಸಿದರು. ಶಾಸಕ ಜನಾರ್ದನರೆಡ್ಡಿ, ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಇದ್ದರು.
Published on

ರಾಯಚೂರು: ಲೋಕಸಭೆ ಚುನಾವಣೆ ಚುನಾವಣೆಯ ನಾಮಪತ್ರ ಸಲ್ಲಿಕೆ ಭರಾಟೆ ಗುರುವಾರ ಜೋರಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾಕಾರಿ ಚಂದ್ರಶೇಖರ ನಾಯಕಗೆ ನಾಮಪತ್ರ ಸಲ್ಲಿಸಿದರು.
ಈಗಾಗಲೇ ಎರಡು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ನ ಜಿ.ಕುಮಾರನಾಯಕ ಪುನಃ ಎರಡು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಿದರು. ರಾಜಾ ಅಮರೇಶ್ವರ ನಾಯಕ ಕೂಡಾ ಪ್ರತ್ಯೇಕವಾಗಿ ಎರಡು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಹೆಸರಿನಲ್ಲಿ ಮಾಜಿ ಸಂಸದ ಬಿ.ವಿ.ನಾಯಕರ ನಾಮಪತ್ರವನ್ನು ಸೂಚಕ ಮಲ್ಲಿಕಾರ್ಜುನ ಜಕ್ಕಲದಿನ್ನಿ ಹಾಗೂ ಬೆಂಬಲಿಗರಾದ ತಿಮ್ಮಾರೆಡ್ಡಿಗೌಡ ಭೋಗಾವತಿ, ಸುರೇಂದ್ರ ಕಸ್ಬೆ, ಸಂತೋಷ ದಿಕ್ಷಿತ್, ಶ್ರೀನಿ ಚುನಾವಣಾಕಾರಿಗೆ ಸಲ್ಲಿಸಿದರು. ಪಕ್ಷೇತರರಾಗಿ ನರಸಿಂಹ ನಾಯಕ ಕರಡಿಗುಡ್ಡ, ಅಮರೇಶ ಕೂಡಾ ನಾಮಪತ್ರ ಸಲ್ಲಿಕೆ ಮಾಡಿದರು. ಇದರೊಂದಿಗೆ ಒಟ್ಟು 9 ಜನರಿಂದ 14 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.
ಬಿಜೆಪಿ ಅಭ್ಯರ್ಥಿ ಜತೆಗೆ ಶಾಸಕರಾದ ಜನಾರ್ದನರೆಡ್ಡಿ, ಡಾ.ಶಿವರಾಜ ಪಾಟೀಲ್, ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ನೇಮಿರಾಜ ನಾಯ್ಕ, ರಾಜಾ ವೆಂಕಟಪ್ಪ ನಾಯಕ, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಲಲಿತಾ ಕಡಗೋಲ ಇದ್ದರು.
ಕಾಂಗ್ರೆಸ್ ಅಭ್ಯರ್ಥಿ ಜತೆಗೆ ಸಚಿವರಾದ ಎನ್.ಎಸ್.ಬೋಸರಾಜು, ಶರಣಬಸಪ್ಪ ದರ್ಶನಾಪುರ, ಶಾಸಕರಾದ ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಪಕ್ಷದ ಕಾರ್ಯಾಧ್ಯಕ್ಷ ಎ.ವಸಂತಕುಮಾರ, ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net