ಸುಧಾಕರ್ ಗೆಲುವಿಗೆ ಎಂಟಿಬಿ ಹಾರೈಕೆ

MTB
MTB ಹಸ್ತಲಾಘವ
Published on

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ದೇಶದ ಭವ್ಯ ಭವಿಷ್ಯದ ದೃಷ್ಟಿಯಿಂದ ಮತ್ತೊಮ್ಮೆ ದೇಶಕ್ಕೆ ಮೋದಿ ಅವರ ಅವಶ್ಯಕತೆ ಇದೆ, ಈ ಹಿನ್ನೆಲೆಯಲ್ಲಿ ಬಹುಮತದೊಂದಿಗೆ ಕೇಂದ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸುಧಾಕರ್ ಗೆಲುವು ಅವಶ್ಯಕವಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಾ.ಕೆ.ಸುಧಾಕರ್ ಅವರಿಗೆ ಹಸ್ತಲಾಘವ ನೀಡಿ ಶುಭಕೋರಿ ಮಾತನಾಡಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿಯುವ ಮೂಲಕ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಒಗ್ಗಟ್ಟಿನ ಮಂತ್ರವೊಂದೇಈ ಬಾರಿ ಕ್ಷೇತ್ರದಲ್ಲಿ ಮೈತ್ರಿ ಗೆಲುವಿನ ನಗೆ ಬೀರಲು ಸಾಧ್ಯ ಎಂದು ಹೇಳಿದರು. ಕ್ಷೇತ್ರದ ಬಿಜೆಪಿಯಲ್ಲಿ ಯಾವುದೇ ಗೊಂದಲವಾಗಲಿ ಅಸಮಾಧಾನವಾಗಲಿ ಇಲ್ಲ ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು ಸುಧಾಕರ್ ಅವರನ್ನು ಬಹುಮತದೊಂದಿಗೆ ಗೆಲ್ಲಿಸಲು ಶ್ರಮಿಸುತ್ತೇವೆ ಎಂದರು.
ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮನ್ವಯತೆಯಿಂದ ಚುನಾವಣೆ ಎದುರಿಸಲಿದ್ದು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತೇವೆ ಎಂದರು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್ ಕಾರ್ಯಕರ್ತರಿಗೂ ನೀಡಲಾಗುತ್ತದೆ ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಿ ಕಾಂಗ್ರೆಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net