9 ಸ್ಪರ್ಧಿಗಳಿಂದ ನಾಮ ಪತ್ರ ಸಲ್ಲಿಕೆ

Vote
Published on

ಮೈಸೂರು: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಬುಧವಾರ ಒಟ್ಟು 9 ನಾಮಪತ್ರ ಸಲ್ಲಿಕೆಯಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಭಾರತೀಯ ಜನತಾ ಅಭ್ಯರ್ಥಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಸತೀಶ್ ಕಾರಂತ್, ಡಾ.ಎಸ್.ಆರ್ ಹರೀಶ್ ಆಚಾರ್ಯ, ಎಚ್.ಟಿ.ಅರುಣ್ ಹಾಗೂ ಎಂ.ರಮೇಶ ಅವರು ನಾಮಪತ್ರ ಸಲ್ಲಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎಸ್.ಪಿ.ದಿನೇಶ್, ಬಿ ಮಹಮ್ಮದ್, ಶೇಖ್ ಬಾವ ಮಂಗಳೂರು ಹಾಗೂ ಶಹರಾಜ್ ಮುಜಾಹಿದ್ ಸಿದ್ದಿಕ್ಕಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net