

ಕೊಕ್ಕಡ: ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ. ಮಂಗಳವಾರ ಅಧಿಕಾರ ಸ್ವೀಕರಿಸಿದರು. ಸುಬ್ರಹ್ಮಣ್ಯ ಶಬರಾಯ 2 ಬಾರಿ ಕೊಕ್ಕಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಕೊಕ್ಕಡ ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷರಾಗಿ, ಕೊಕ್ಕಡ ವರ್ತಕರ ಸಂಘದ ಅಧ್ಯಕ್ಷರಾಗಿ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅನುಭವವನ್ನು ಹೊಂದಿದ್ದು, ಇದೀಗ 2ನೇ ಅವಧಿಗೆ ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸೇವಾ ಕಾರ್ಯ ಮುಂದುವರಿಸಲಿದ್ದಾರೆ.
ಸಮಿತಿಯ ಸದಸ್ಯರಾಗಿ ಹರಿಶ್ಚಂದ್ರ ಜಿ, ಸಿನಿ ಗುರುದೇವನ್, ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಕುಮಾರ್ ನೇಮಕವಾಗಿದ್ದಾರೆ. ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿ ಅಧಿಕಾರ ಹಸ್ತಾಂತರ ಮಾಡಿದರು.