ಮುತ್ತಪ್ಪ ದೇಗುಲದಲ್ಲಿ ಸುಬ್ರಹ್ಮಣ್ಯ ಷಷ್ಠಿ

Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ


ಶ್ರೀ ಮುತ್ತಪ್ಪ ದೇವಾಲಯದಲ್ಲಿ ನ.೨೯ ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ ಆಯೋಜಿಸಲಾಗಿದೆ ಎಂದು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್ ಹೇಳಿದ್ದಾರೆ.

ಮಡಿಕೇರಿಯ ಪ್ರತಿಷ್ಠಿತ ಶ್ರೀ ಮುತ್ತಪ್ಪ ದೇವಾಲಯ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಷಷ್ಠಿ ಪೂಜೆ ಆಯೋಜಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ ಸೇವೆ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ಸೇವೆ ನಡೆಯಲಿದೆ. ಅಂದು ಬೆಳಗ್ಗೆ ೯ ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಸುಬ್ರಮಣ್ಯ ದೇವರ ಶ್ರೀಭೂತ ಬಲಿ, ೧೨.೩೦ ಗಂಟೆಗೆ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ೭ ಗಂಟೆಗೆ ಭಜನಾ ಕಾರ್ಯಕ್ರಮ, ಮಹಾಪೂಜೆ ನಂತರ ಪ್ರಸಾದ ವಿತರಣೆ ಮಾಡಲಾಗುತ್ತದೆ ಎಂದರು.

ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ಅಧ್ಯಕ್ಷ ಎಸ್. ಸುರೇಶ್ ಮುತ್ತಪ್ಪ, ಉಪಾಧ್ಯಕ್ಷ ಮನುರಂಜನ್, ಷಷ್ಠಿ ಉತ್ಸವ ಸಮಿತಿ ಅಧ್ಯಕ್ಷ ಪಿ. ವಿನೋದ್, ಖಜಾಂಚಿ ಸದಾಶಿವ ಶೆಟ್ಟಿ, ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ಉಪಾಧ್ಯಕ್ಷೆ ದೀಪಾ ಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net