ಸಿದ್ದಲಿಂಗಪುರ ದೇವಸ್ಥಾನದಲ್ಲಿ ಈ ಬಾರಿ ಸುಬ್ರಹ್ಮಣ್ಯ ಷಷ್ಠಿ ರದ್ದು

subramanya shashti
Published on

ಮೈಸೂರು: ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಡಿ.18 ರಂದು ದೇವಾಲಯದಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ರದ್ದು ಪಡಿಸಲಾಗಿದೆ.

ದೇವಾಲಯದ ರೂಢಿ ಸಂಪ್ರದಾಯಗಳಿಗೆ ಅನುಗುಣವಾಗಿ ದೇವಾಲಯದ ಧಾರ್ಮಿಕ ಆಚರಣೆಗೆ ಧಕ್ಕೆಯಾಗದಂತೆ ಪೂಜಾ ಕೈಂಕರ್ಯಗಳನ್ನು ದೇವಾಲಯದ ಒಳ ಆವರಣದಲ್ಲಿ ನಡೆಸಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್ ಗಿರೀಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net