

ಅರಕಲಗೂಡು: ಮಳೆಯಿಂದ ಮನೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಸಹಾಯಧನ ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲೆ ನಿರ್ದೇಶಕಿ ಲೀಲಾವತಿ ಹೇಳಿದರು.
ತಾಲೂಕಿನ ಶ್ಯಾನುಭೋಗನಹಳ್ಳಿ ಕಾರ್ಯಕ್ಷೇತ್ರದ ದುಮ್ಮಿ ಕಾಲನಿ ಗ್ರಾಮದಲ್ಲಿ ಇತ್ತೀಚೆಗೆ ಸಂತ್ರಸ್ತ ಮಹಿಳೆಯರಿಗೆ ಸಹಾಯಧನ ವಿತರಿಸಿ ಮಾತನಾಡಿದ ಅವರು, ಮಳೆಯಿಂದ ವಾಸದ ಮನೆಗಳಿಗೆ ಹಾನಿಯಾಗಿ ಕಷ್ಟದಲ್ಲಿದ್ದ ಗೀತಾ, ಬೇಲೂರಮ್ಮ, ಪುಟ್ಟಲಕ್ಷ್ಮೀ, ಯಶೋದಾ, ಸರೋಜಾ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಹಾಯಧನ ಒದಗಿಸಲಾಗಿದೆ ಎಂದರು.
ಕೊಡಗು ಜಿಲ್ಲೆ ಜನ ಜಾಗೃತಿ ವೇದಿಕೆ ಸದಸ್ಯ ಶಾಂತಮಲ್ಲಪ್ಪ, ತಾಲೂಕು ಯೋಜನಾಧಿಕಾರಿ ಪ್ರಕಾಶ್ ಮೊಗವೀರ ಇದ್ದರು.