ಯೋಜನೆಯಿಂದ ಭಜನಾ ಮಂದಿರಕ್ಕೆ ಸಹಾಯಧನ

New Project (42)
Published on

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನ ಬಿ.ಸಿ.ರೋಡ್ ವಲಯ ಬಂಟ್ವಾಳಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 2 ಲಕ್ಷ ರೂ. ಅನುದಾನದ ಮಂಜೂರಾತಿ ಪತ್ರವನ್ನು, ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಭಜನಾ ಮಂಡಳಿಯ ಅಧ್ಯಕ್ಷ ಗಣೇಶ್‌ದಾಸ್ ಮತ್ತು ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಬಿ.ಮೂಡ ಒಕ್ಕೂಟದ ಅಧ್ಯಕ್ಷೆ ಪ್ರತಿಭಾ ಶೆಟ್ಟಿ ಮತ್ತು ಪದಾಧಿಕಾರಿಗಳು, ಹಿರಿಯರಾದ ಸೇಸಪ್ಪ ದಾಸಯ್ಯ, ಸೇವಾಪ್ರತಿನಿಧಿ ಆಶಾಲತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net