ಕೃಷಿ ಚಟುವಟಿಕೆಗೆ ಮಳೆಯ ಕೊರತೆ: ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಗೆ ಸಹಾಯಧನ

Drip irrigation
Published on

ಮಂಡ್ಯ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ(ಸೂಕ್ಷ್ಮ ನೀರಾವರಿ) ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಅಂತೆಯೇ ಕಾಫಿ, ಟೀ, ರಬ್ಬರ್ ಹಾಗೂ ಅಡಿಕೆ ಬೆಳೆಗಳನ್ನು ಹೊರತುಪಡಿಸಿ ಉಳಿದೆಲ್ಲ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಕಲ್ಪಿಸಲಾಗುತ್ತಿದೆ.

ಒಂದು ಕುಟುಂಬಕ್ಕೆ 5 ಹೆಕ್ಟೇರ್ ವಿಸ್ತೀರ್ಣದವರೆಗೆ ಸಹಾಯಧನ ನೀಡಲು ಅವಕಾಶವಿದೆ. ಹನಿ ನೀರಾವರಿ ಅಳವಡಿಸಿಕೊಳ್ಳುವ ರೈತರಿಗೆ ಮೊದಲ 2 ಹೆಕ್ಟೇರ್‌ವರೆಗೆ ಸಾಮಾನ್ಯ ವರ್ಗದ ರೈತರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90ರಷ್ಟು ಸಹಾಯಧನ ಕಲ್ಪಿಸಲಾಗುತ್ತಿದೆ. ಉಳಿಕೆ 3 ಹೆಕ್ಟೇರ್ ವಿಸ್ತೀರ್ಣಕ್ಕೆ ಎಲ್ಲ ವರ್ಗದ ರೈತರಿಗೆ ಶೇ.45ರಷ್ಟು ಸಹಾಯಧನ ನೀಡಲಾಗುವುದು.

ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಹೊಂದಿರುವ ರೈತರು, ಇಲಾಖೆಯಿಂದ ಅನುಮೋದನೆಗೊಂಡಿರುವ ಸಂಸ್ಥೆಯಿಂದ ಘಟಕವನ್ನು ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ಆರ್ಥಿಕ ಸಮಸ್ಯೆ ಇದ್ದರೆ ತಮ್ಮ ವಂತಿಕೆಯನ್ನು ಪಾವತಿಸಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಾಹಿತಿಗೆ ಹೋಬಳಿಮಟ್ಟ ಹಾಗೂ ತಾಲೂಕು ಮಟ್ಟದ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net