ಜಿಮ್ ಸ್ಥಾಪನೆಗಾಗಿ ಸಹಾಯಧನ

application
Published on

ಪರಿಶಿಷ್ಟ ಜಾತಿ ಉಪ ಯೋಜನೆಯಡಿ 2023-24 ನೇ ಸಾಲಿನ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ನಜರ್‌ಬಾದ್‌ನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸೆ.6ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0821-2564179 ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net