ಪಿಎಂ ಮಾತೃವಂದನಾ ಯೋಜನೆಯಡಿ ಸಹಾಯಧನ

pregnant
Published on

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ತಾಯಿ-ಮಗು ಆರೋಗ್ಯ ಮತ್ತು ಪೌಷ್ಟಿಕಾಂಶವನ್ನು ಸುಧಾರಿಸಲು ಮೊದಲ ಪ್ರಸವದ ಗರ್ಭಿಣಿ /ಬಾಣಂತಿ ಮಹಿಳೆಯರಿಗೆ ಎರಡು ಕಂತುಗಳಲ್ಲಿ 5,000 ರೂ. ಹಾಗೂ ಎರಡನೇ ಮಗುವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಫಲಾನುಭವಿಗಳಿಗೆ 6,000 ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ನೋಂದಾಯಿಸಿ ಸೌಲಭ್ಯವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು-560029 ಅಥವಾ ದೂ: 080-29578688 ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net