ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ

blm (2)
Published on

ಕಾರ್ಕಳ: ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ಪಶ್ಚಿಮ ಬಂಗಾಳದ ಶಿಕ್ಷಣತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆ ಸ್ಥಾಪಕ ಬಾಬರ್ ಅಲಿ ಹೇಳಿದರು.

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ‘ಶಿಕ್ಷಣವೇ ಎಲ್ಲ’ ಶೀರ್ಷಿಕೆಯಡಿ ಕ್ರಿಯೇಟಿವ್ ಸ್ಫೂರ್ತಿ ಮಾತು ವಿಶೇಷ ಉಪನ್ಯಾಸದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಹಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅವರನ್ನು ಗೌರವಿಸಿದರು. ಬೋಧಕ - ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net