

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ವಿಭಿನ್ನವಾಗಿ ಆಲೋಚನೆ ಶಕ್ತಿ ಬೆಳೆಸಿಕೊಳ್ಳಬೇಕು. ಕಲಿಕೆಯ ಮನಸ್ಸಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಬರುವ ಪ್ರತಿಯೊಂದು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಗೆಲ್ಲಬೇಕು ಎಂದು ಇಸ್ರೋದ ಗ್ರೂಪ್ ಡೈರೆಕ್ಟರ್ ಡಾ.ನಾಗೇಶ ಎಸ್.ಕೆ. ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು.
ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಎನ್.ಸದಾಶಿವ ನಾಯಕ್ ಸ್ವಾಗತಿಸಿದರು.
ಜಿ.ವೆಂಕಟೇಶ ಬಿ. ಶೆಣೈ ಸ್ವಸ್ತಿವಾಚನಗೈದರು. ಕವಿತಾ ಎಂ.ಸಿ ವರದಿ ವಾಚಿಸಿದರು. ದೀಕ್ಷಿತ್ ಮೇಸ್ತ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಕ್ಷಮಾ ಆಚಾರ್ಯ ಮತ್ತು ವೈಷ್ಣವಿ ಅತಿಥಿಗಳನ್ನು ಪರಿಚಯಿಸಿದರು. ಗೋಪಾಲ ದೇವಾಡಿಗ ವಂದಿಸಿದರು. ಶ್ರಾವ್ಯ, ಶ್ರೀರಕ್ಷಾ ಶೆಣೈ, ಸಂಜನಾ, ಪ್ರಜ್ಞಾ, ಅಂಕಿತಾ, ಪ್ರಥಮ್, ಗುರುಚರಣ್ ಮತ್ತು ಭಾರತಿ ಕಾರ್ಯಕ್ರಮ ನಿರೂಪಿಸಿದರು.
2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಹರ್ಷಿತಾ ಎಸ್.ಪೂಜಾರಿ ಅವರಿಗೆ ದಿ.ಬಾಂಡ್ಯ ರವಿ ಪೈ ಮತ್ತು ಬಾಂಡ್ಯ ಸುಧಾಕರ ಪೈ ಸಹೋದರರ ವತಿಯಿಂದ ನೀಡಲಾಗುವ ಚಿನ್ನದ ಪದಕ ಹಾಗೂ ನಗದು ನೀಡಿ ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ಸಾಧನೆಗೈದ ಸಹನಾ ಖಾರ್ವಿ ಅವರನ್ನು ಗೌರವಿಸಲಾಯಿತು. ಶೈಕ್ಷಣಿಕ ಸ್ಪರ್ಧೆಗಳಲ್ಲಿ ಮತ್ತು ಪಠ್ಯ ವಿಭಾಗಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.