

ಕೊಡಗು : ವಿರಾಪಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ಜೀವನದ ಯಶಸ್ವಿನ ಗುಟ್ಟು ಎಂಬ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ಮುಂಬೈ ಐಐಟಿ ನಿವೃತ್ತ ಪ್ರಾಧ್ಯಾಪಕ ಡಾ.ಕುಮಾರ್ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂಬ ಆಸೆ ಇರುತ್ತದೆ. ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಪ್ರತಿಯೊಬ್ಬರೂ ಆತ್ಮವಿಶ್ವಾಸ, ಶಿಸ್ತು, ಉತ್ತಮ ಅಭ್ಯಾಸ, ಒಳ್ಳೆಯ ಪುಸ್ತಕಗಳ ಓದುವಿಕೆ, ಒಳ್ಳೆಯವರ ಒಡನಾಟ ಇಟ್ಟುಕೊಳ್ಳಬೇಕು. ಆಗ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಕಾರ್ಯುಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಬಸವರಾಜು, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ವೀಣಾ, ಗೀತಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.