

ವಿಜಯವಾಣಿ ಸುದ್ದಿಜಾಲ ಶಂಕರನಾರಾಯಣ
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ತರಬೇತಿ, ಸತತ ಅಭ್ಯಾಸ ಮಹತ್ವ ಪಡೆದಿದೆ. ಪುಸ್ತಕದ ವಿದ್ಯೆ ಜತೆಗೆ ಜೀವನದ ತತ್ವ ಅನುಸರಿಸಿದರೆ ಯಶಸ್ಸು ಸಾಧ್ಯ. ಲಯನ್ಸ್ ಕ್ಲಬ್ ಸಮಾಜಸೇವೆಯಲ್ಲಿ ಉನ್ನತ ಮಾದರಿ ಅಳವಡಿಸಿಕೊಂಡಿದೆ. ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲವಾಗುವಂತೆ ಐದು ದಿನಗಳ ಕಾಲ ವೈವಿಧ್ಯಮಯ ವಿಚಾರಗಳ ಬಗ್ಗೆ ತಜ್ಞರಿಂದ ತರಬೇತಿ ನೀಡಿರುವುದು ವಿಶಿಷ್ಟ ಕಾರ್ಯಕ್ರಮವಾಗಿದೆ ಎಂದು ಲಯನ್ಸ್ 317ಸಿ ಜಿಲ್ಲಾ ಸಪ್ನಾ ಸುರೇಶ್ ಹೇಳಿದರು.
ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್, ಲಿಯೋ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಸ್ಥಾಪಾಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಪ್ರಾಯೋಜಕತ್ವದಲ್ಲಿ ಬದಲಾವಣೆಯತ್ತ ಒಂದು ಹೆಜ್ಜೆ ಸರ್ಕಾರಿ ಕಾಲೇಜುಗಳಲ್ಲಿ ಹಮ್ಮಿಕೊಂಡ ಐದು ದಿನಗಳ ಸರಣಿ ತರಬೇತಿ ಕಾರ್ಯಕ್ರಮಗಳ ಸಮಾರೋಪದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಕಾರ್ಯದರ್ಶಿ ಕೆ.ಸಂಜೀವ ಆರ್ಡಿ, ಉಪಾಧ್ಯಕ್ಷ ಮಹಾಬಲ ನಾಯ್ಕ ಅಲ್ಬಾಡಿ, ಮಾಜಿ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ವೈ.ಪಟ್ಟಾಭಿರಾಮ್ ಭಟ್ ಮರೂರು, ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ, ಸದಸ್ಯೆ ಭಾರ್ಗವಿ ಪಿ.ಭಟ್ ಗೋಳಿಯಂಗಡಿ, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸರಣಿ ಕಾರ್ಯಕ್ರಮಗಳ ಬಗ್ಗೆ ಅನಿಸಿಕೆ ತಿಳಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ.ವಸಂತ್ ಜಿ. ಸ್ವಾಗತಿಸಿದರು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕ ರಮೇಶ್ ಪರಿಚಯಿಸಿದರು. ವಾಣಿಜ್ಯ ಸಹಾಯಕ ಪ್ರಾಧ್ಯಾಪಕಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ವಂದಿಸಿದರು.