ಸತತ ಪ್ರಯತ್ನದಿಂದ ಮಾತ್ರ ಯಶಸ್ಸು

Paryatana
Published on

ಹುಬ್ಬಳ್ಳಿ: ಪ್ರತಿಯೊಬ್ಬರೂ ಜ್ಞಾನದಾಹ ಬೆಳೆಸಿಕೊಳ್ಳಬೇಕು. ಉತ್ತಮ ಗ್ರ್ರಂಥಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್‌ನ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ವಿವೇಕ ಉಡುಪ ಹೇಳಿದರು.

ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಬಯೋ ಟೆಕ್ನಾಲಜಿ ಸಭಾ ಭವನದಲ್ಲಿ ವಿವೇಕ ಜಾಗೃತ ಬಳಗದವರು ಇತ್ತೀಚೆಗೆ ಏರ್ಪಡಿಸಿದ್ದ ಯೋಗ ಪರ್ಯಟನ, ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಲ್ಲರೂ ಉಪಕಾರ ಮಾಡುವ ಸ್ವಭಾವ ಹೊಂದಬೇಕು. ಸಮಾಜಕ್ಕೆ ಸ್ಫೂರ್ತಿ ತುಂಬುವ ಕೆಲಸ ಮಾಡಬೇಕು. ಮನಸ್ಸಿನ ನಿಗ್ರಹಕ್ಕೆ ಯೋಗ, ಧ್ಯಾನ, ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಬೇಕು. ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಲಭ್ಯವಾಗುತ್ತದೆ ಎಂದರು.

ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ ಮಾಡಲಾಯಿತು. ಸ್ವಯಂಸೇವಕ ಬದ್ರಿನಾಥ ಬೇವಿನಕಟ್ಟಿ ಆರೋಗ್ಯ ಸಿಂಚನ ಸುಧಾ ಕುರಿತು ವಿವರಿಸಿದರು.

ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಕುಲಸಚಿವ ಡಾ. ಬಸವರಾಜ ಅನಾಮಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಇನ್ಸಪೆಕ್ಟರ್ ಜೆ.ಎಂ. ಕಾಲಿಮಿರ್ಚಿ, ಡಾ. ಮಹೇಶ ಬ್ಯಾಕೋಡಿ, ಹಿರಿಯ ಸದಸ್ಯರಾದ ರತ್ನಾ ನೀರಲಗಿ, ನಾಗರಾಜ ಲಕ್ಷ್ಮೇಶ್ವರ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ, ಯೋಗ ಶಿಕ್ಷಕಿ ಮಂಗಳಾ ನರವಣೆ ಉಪಸ್ಥಿತರಿದ್ದರು.

ವಿವೇಕ ಜಾಗೃತ ಬಳಗದ ಅಧ್ಯಕ್ಷ ವಿಜಯಾ ಪರಡ್ಡಿ ಸ್ವಾಗತಿಸಿದರು. ಎಂ.ವೈ. ಜಯಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಧಾರವಾಡ ವಿವೇಕಾನಂದ ಜಾಗೃತ ಬಳಗದ ಛಾಯಾ ಶಿಂಧೆ, ಡಾ. ಪಂಕಜಾ ಬ್ಯಾಕೋಡಿ ನಿರೂಪಿಸಿದರು. ಡಾ. ಬಿ.ಎಸ್. ಮಾಳವಾಡ ವಂದಿಸಿದರು.
900ಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದ ಪ್ರಯೋಜನ ಪಡೆದರು. ಡಿವೈನ್ ಪಾರ್ಕ್‌ನಿಂದ ಪ್ರಕಟವಾದ 600ಕ್ಕೂ ಅಧಿಕ ಗ್ರಂಥ ಮತ್ತು ನಿಯತ ಕಾಲಿಕೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net