ಅವಕಾಶ ಸದುಪಯೋಗದಿಂದ ಸಾಧನೆ ಸಾಧ್ಯ

pdb (1)
Published on

ಪಡುಬಿದ್ರಿ: ಗೆಲುವು ಶಾಶ್ವತವಲ್ಲ, ನಿರಂತರ ಸಾಧನೆ ವಾಡಲು ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿವಾರು ಕಿವಿವಾತು ಹೇಳಿದರು.

ನಾಡಪ್ರಭು ಕೆಂಪೇಗೌಡರ ಜನ್ಮದಿನ ಪ್ರಯುಕ್ತ ಪಲಿವಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಪು ತಾಲೂಕು ಮಟ್ಟದ ಅಂತರ್ ಕಾಲೇಜು ಭಾಷಣ ಮತ್ತು ಪ್ರಬಂಧ ಸ್ಪರ್ಧೆಯ ಬಹುವಾನ ವಿತರಣಾ ಸವಾರಂಭದಲ್ಲಿ ವಾತನಾಡಿದರು.

ಪಲಿವಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ವಾತನಾಡಿದರು. ಭಾಷಣ ಸ್ಪರ್ಧೆಯಲ್ಲಿ ಅದವಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಬೇಬಿ ಜೈನ್ ಮತ್ತು ಪ್ರತೀಕ್ಷಾ ಶೆಟ್ಟಿ ಪ್ರಥಮ ಹಾಗೂ ದ್ವಿತೀಯ, ಪಲಿವಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹರ್ಷಿತಾ ತೃತೀಯ ಸ್ಥಾನ ಗಳಿಸಿದರು.

ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಮಿತಾ ಮತ್ತು ನಿಧಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಅದವಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಚರಣಾ ತೃತೀಯ ಬಹುಮಾನ ಗಳಿಸಿದರು.

ಗ್ರಾಪಂ ಉಪಾಧ್ಯಕ್ಷ ರಾಯೇಶ್ವರ ಪೈ, ಸದಸ್ಯೆ ಸುಜಾತಾ, ಮುದರಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸೀತಾರಾಮ ಪ್ರಭು, ಕಟಪಾಡಿ ಎಸ್‌ವಿಎಸ್ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಭಾಸ್ಕರ ಕಾಮತ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಜ್ಯೋತಿ, ಚೈತ್ರಾ, ನವಿತಾ ಹಾಗೂ ಸ್ವಾತಿ ತೀರ್ಪುಗಾರರಾಗಿ ಸಹಕರಿಸಿದರು. ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್ ಸ್ವಾಗತಿಸಿದರು. ಉಪನ್ಯಾಸಕಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net