

ಕಲಾದಗಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಶ್ರದ್ಧೆ, ದಢಸಂಕಲ್ಪ, ತ್ಯಾಗ, ಪರಿಶ್ರಮದಿಂದ ನಿನ್ನೆಗಿಂತ ಈ ದಿನವನ್ನು ಹೆಚ್ಚು ಉತ್ತಮಗೊಳಿಸಿದರೆ ಯಶಸ್ಸು ಕಾಣಲು ಸಾಧ್ಯ ಎಂದು ಲೋಕಾಪುರದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಯ್ಯ ಹೇಳಿದರು.
ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ, ಕ್ರೀಡಾ ಮತ್ತು ವಿವಿಧ ಚಟುವಟಿಕೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಶಸ್ಸು ಸುಮ್ಮನೆ ಸಿಗುವುದಿಲ್ಲ. ಕನಸು ಸಾಕಾರ ಮಾಡಿಕೊಳ್ಳಲು ನಿಮ್ಮ ಮೆದುಳನ್ನು ಚುರುಕುಗೊಳಿಸಿ. ಸಮಯವನ್ನು ವ್ಯರ್ಥಮಾಡದೆ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ ಎಂದರು.
ಕನ್ನಡ ಸಹಾಯಕ ಪ್ರಾಧ್ಯಾಪಕ ಯಲ್ಲಪ್ಪ ಜಿ. ಮಾತನಾಡಿ, ಸಮಾಜ ನಮ್ಮನ್ನು ಗುರುತಿಸುವಂತೆ ನಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಬರೀ ಶಿಕ್ಷಣದಿಂದ ಸಾಧನೆ ಸಾಧ್ಯವಿಲ್ಲ. ಶಿಕ್ಷಣದೊಂದಿಗೆ ಕೌಶಲ ಬೆಳೆಸಿಕೊಳ್ಳಿ ಎಂದರು.
ಸರ್ಕಾರಿ ಗಂಡು ಮಕ್ಕಳ ಶಾಲೆ ಮುಖ್ಯಗುರು ಪಿ.ಎಲ್. ಹೂಗಾರ, ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಬಿ. ಮಹಾಂತೇಶ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಖಾತುನಬಿ ಹ. ರೋಣ, ಉಪಾಧ್ಯಕ್ಷ ಪಕೀರಪ್ಪ ಮ. ಮಾದರ, ಸದಸ್ಯ ಎಂ.ಎ. ತೇಲಿ, ರಾಜ್ಯಶಾಸ ಸಹಾಯಕ ಪ್ರಾಧ್ಯಾಪಕಿ ಯಂಕಮ್ಮ, ಅರ್ಥ ಶಾಸ ಸಹಾಯಕ ಪ್ರಾಧ್ಯಾಪಕಿ ಡಾ.ಬಿಂದು ಎಚ್.ಎ. ಉಪಸ್ಥಿತರಿದ್ದರು.
ಪ್ರಾಧ್ಯಾಪಕ ಡಾ.ಲೋಕಣ್ಣ ಭಜಂತ್ರಿ ಸ್ವಾಗತಿಸಿದರು. ಮೌಲಾಸಾಬ ಮುಲ್ಲಾ ವಂದಿಸಿದರು. ಪುಂಡಲಿಕ ಹುನ್ನಳ್ಳಿ ನಿರೂಪಿಸಿದರು.