ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ಸಾಧ್ಯ

5
Published on


ಮೈಸೂರು:
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಕಲಿತ ಜೀವನ ಮೌಲ್ಯಗಳನ್ನು ಮರೆಯದೆ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.
ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಡಾ.ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ ನಡೆದ ಪದವೀಧರ ದಿನಾಚರಣೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಪ್ರಶಂಸನೀಯ ಪ್ರಮಾಣಪತ್ರಗಳನ್ನು ನೀಡಿ ಅವರು ಮಾತನಾಡಿದರು.
ಇಂದು ತಾಂತ್ರಿಕಜ್ಞಾನಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವುದರಿಂದ ವಿದ್ಯಾರ್ಥಿಗಳು ಅದರಲ್ಲೂ ನೈಪುಣ್ಯತೆಯನ್ನು ಪಡೆಯಬೇಕಾಗಿದೆ. ಮುಂದಿನ ದಿನಗಳಲ್ಲಿ ಪರಿಶ್ರಮ, ಸ್ವಯಂ ಅಧ್ಯಯನ, ಪ್ರಾಮಾಣಿಕತೆ, ಸಕಾರಾತ್ಮಕ ಮನೋಭಾವಗಳನ್ನು ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net