ಸ್ವ ಉದ್ಯೋಗದಿಂದ ಸಾಧನೆ ಸಾಧ್ಯ

Success is possible through self-employment.
ತೇರದಾಳ ಪಟ್ಟಣದಲ್ಲಿ ಪುರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸಲಾಯಿತು. ಮುಖ್ಯಾಧಿಕಾರಿ ಆನಂದ ಕೆಸರಗೊಪ್ಪ, ಮಲ್ಲಿಕಾರ್ಜುನ ಬಿ. ಪಾಟೀಲ, ಪಿ.ಪಿ. ನೀಲಕಂಠಮಠ, ಗೌರಿ ಮಾಲಾಪುರ, ನೇತ್ರಾವತಿ ಹಟ್ಟೆನ್ನವರ ಮತ್ತಿತರರಿದ್ದಾರೆ.
Published on

ತೇರದಾಳ : ಸ್ವಾವಲಂಬಿ ಜೀವನ ನಡೆಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಜಾರಿಗೊಳಿಸಿ ಬೀದಿ ಬದಿ ವ್ಯಾಪಾರ ನಡೆಸಲು ಸಹಾಯ ಧನ ನೀಡುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಆನಂದ ಕೆಸರಗೊಪ್ಪ ಹೇಳಿದರು.

ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಗುರುವಾರ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರು ನೌಕರಿಗಾಗಿ ಸಮಯ ವ್ಯರ್ಥ ಮಾಡದೇ, ಸ್ವ ಉದ್ಯೋಗದ ಮೂಲಕ ಸಾಧನೆ ಮಾಡಬಹುದಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಇದುವರೆಗೆ 700ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರು ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಯೋಜನೆಯಡಿ ಹತ್ತು ಸಾವಿರದಿಂದ ಹತ್ತು ಲಕ್ಷದವರೆಗೆ ಸಾಲ ಪಡೆದುಕೊಳ್ಳಬಹುದಾಗಿದೆ ಎಂದರು.

ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿರಾದಾರ ಪಾಟೀಲ, ಯೋಜನಾಧಿಕಾರಿ ಪಿ.ಪಿ. ನೀಲಕಂಠಮಠ, ಗೌರಿ ಮಾಲಾಪುರ, ನೇತ್ರಾವತಿ ಹಟ್ಟೆನ್ನವರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net