ಉತ್ತಮ ಶಿಕ್ಷಣದಿಂದ ಸಾಧನೆ ಸಾಧ್ಯ

8-byd-1
Published on

ಬ್ಯಾಡಗಿ: ವ್ಯಕ್ತಿಯ ಸಾಧನೆ ಹಾಗೂ ಗುಣಮಟ್ಟದ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ಮಕ್ಕಳಿಗೆ ಬಾಲ್ಯದಲ್ಲಿ ಗುಣಮಟ್ಟದ ಶಿಕ್ಷಣ ಪೂರೈಸಿದಾಗ ಮುಂದಿನ ಶೈಕ್ಷಣಿಕ ಸಾಧನೆಗೆ ಅನುಕೂಲವಾಗಲಿದೆ ಎಂದು ಬಿಇಎಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ತಿಳಿಸಿದರು.

ಪಟ್ಟಣದ ಬಿಇಎಸ್ ಕಾಲೇಜು ಸಭಾಭವನದಲ್ಲಿ ಆಯೋಜಿಸಿದ್ದ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಾಲ್ಯದಲ್ಲಿ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ಕಲಿಸುವ ಪೂರಕ ವಾತಾವರಣ ಸರ್ಕಾರಿ ಶಾಲೆಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಕೂಡ ಕಲಿಸುವ ಅವಧಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಕೇವಲ ಅಂಕಗಳಿಕೆ ಶಿಕ್ಷಣಕ್ಕಿಂತ ಜೀವನಕ್ಕೆ ಅಗತ್ಯ ಶಿಕ್ಷಣವನ್ನು ಪೂರೈಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಎಂ. ಉಮಾಪತಿ ಹಾಗೂ ಚಿದಾನಂದ ಹಿರೇಮಠ ಅವರು ಎರಡು ದಶಕಗಳಿಂದ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಅವರ ಶ್ರಮ ಹಾಗೂ ಸೇವೆಯಿಂದ ಬಿಇಎಸ್ ಶಾಲೆ ಜಿಲ್ಲಾ ಮಟ್ಟದಲ್ಲಿ ಉತ್ತಮ ಖ್ಯಾತಿ ಗಳಿಸಿದೆ ಎಂದರು.

ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಎನ್.ಎಂ. ಉಮಾಪತಿ ಹಾಗೂ ಶಿಕ್ಷಕ ಚಿದಾನಂದ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ, ಪ್ರಾಂಶುಪಾಲ ಎಸ್.ಜಿ. ವೈದ್ಯ, ಡಾ.ಎಸ್.ಎನ್. ನಿಡಗುಂದಿ, ಆಶ್ರಯ ಸಮಿತಿ ಸದಸ್ಯ ಗಿರೀಶಸ್ವಾಮಿ ಇಂಡಿಮಠ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net