

ಕುಂದಾಪುರ: ಜೀವನದಲ್ಲಿ ಕಷ್ಟವೆಂದುಕೊಂಡರೆ ಎಲ್ಲವೂ ಕಷ್ಟವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯವಾಗುತ್ತದೆ. ಬದುಕಿನಲ್ಲಿ ಪರಿಶ್ರಮ ಅಗತ್ಯ. ವಿದ್ಯಾರ್ಥಿ ಜೀವನವನ್ನು ಖುಷಿಯಿಂದ ಕಳೆಯುವುದರ ಜತೆಗೆ ಪರಿಶ್ರಮದಿಂದ ಓದಿದಾಗ ಜೀವನ ಚೆನ್ನಾಗಿರುತ್ತದೆ ಎಂದು ಕೆ.ವಿ.ಸಿ ಸಂಸ್ಥೆಯ ಸಿಎ ದೀಪಿಕಾ ವಸನಿ ಹೇಳಿದರು.
ಯಡಾಡಿಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸೋಮವಾರ ಹಮ್ಮಿಕೊಳ್ಳಲಾದ ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಖಜಾಂಚಿ ಭರತ್ ಶೆಟ್ಟಿ ವಾತನಾಡಿದರು.
ಮಂಗಳೂರಿನ ಕೆವಿಸಿ ಅಕಾಡೆಮಿಯ ನಿರ್ದೇಶಕ ಸಿಎ ಜೇಸನ್ ಕ್ಯಾಸ್ತಲಿನೊ, ಕುಂದಾಪುರದ ಚಾರ್ಟೆಡ್ ಅಕೌಂಟೆಂಟ್ ಸಿಎ ನಾಗರಾಜ್ ಹೆಬ್ಬಾರ್ ಉಪಸ್ಥಿತರಿದ್ದರು. ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್‌ಕುವಾರ್ ಕಾರ್ಯಕ್ರಮ ನಿರೂಪಿಸಿದರು. ಸಿಎ ಫೌಂಡೇಶನ್ ಸಂಯೋಜಕ ಪ್ರಮಥ್ ಶೆಟ್ಟಿ ವಂದಿಸಿದರು.