ಪರಿಶ್ರಮದಿಂದ ಯಶಸ್ಸು ಸಾಧ್ಯ

Success is possible with hard work
ಮಹಾಲಿಂಗಪುರದ ಸೌಜನ್ಯ ನೇಕಾರರ ಸಹಕಾರಿ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ನೇಕಾರರ ಮಕ್ಕಳನ್ನು ಸನ್ಮಾನಿಸಲಾಯಿತು. ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಜಿ.ಎಸ್.ಗೊಂಬಿ ಇದ್ದರು.
Published on

ಮಹಾಲಿಂಗಪುರ: ಜೀವನದ ಸವಾಲುಗಳನ್ನು ಎದುರಿಸುತ್ತ ನಿರಂತರ ಓದುವಿಕೆ ಹಾಗೂ ಪರಿಶ್ರಮ ಪಟ್ಟರೆ ಯಶಸ್ಸು ಸುಗಮವಾಗುತ್ತದೆ ಎಂದು ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಹೇಳಿದರು.

ಸ್ಥಳಿಯ ಶ್ರೀ ಬನಶಂಕರಿದೇವಿ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಸೌಜನ್ಯ ಕೈಮಗ್ಗ ನೇಕಾರರ ಸಹಕಾರಿ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ನೇಕಾರ ಸಮುದಾಯದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನಾಂಗಕ್ಕೆ ಇಂದು ಅವಕಾಶಗಳು ಕಡಿಮೆಯಾಗುತ್ತಿವೆ. ಜನಸಂಖ್ಯೆ ಹೆಚ್ಚಳ ಹಾಗೂ ತಂತ್ರಜ್ಞಾನದ ಬೆಳವಣಿಗೆ ಕಾಣುತ್ತಿರುವ ಸಂದರ್ಭದಲ್ಲಿ ಪರಿಶ್ರಮವಿಲ್ಲದಿದ್ದರೆ ಉಜ್ವಲ ಭವಿಷ್ಯವಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಅಧ್ಯಕ್ಷತೆ ವಹಿಸಿದ್ದ ಮಲ್ಲಪ್ಪ ಭಾವಿಕಟ್ಟಿ, ಸೌಜನ್ಯ ನೇಕಾರ ಸಹಕಾರಿ ಸಂಘದ ಜಿ.ಎಸ್. ಗೊಂಬಿ ಮಾತನಾಡಿದರು.

ಪುರಸಭೆ ಉಪಾಧ್ಯಕ್ಷ ಶೀಲಾ ಭಾವಿಕಟ್ಟಿ, ಡಾ. ಬಿ.ಡಿ. ಸೋರಗಾಂವಿ, ಶಿವಾನಂದ ತಿಪ್ಪಾ, ಶಿದಗಿರೆಪ್ಪ ಕಾಗಿ ಮತ್ತಿತರರಿದ್ದರು. ಬಸವರಾಜ ಮೇಟಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net