ದೈಹಿಕ, ಮಾನಸಿಕ ಸದೃಢತೆಯಿಂದ ಯಶಸ್ವಿ ಜೀವನ

BYD KANUNU SAKSHARATE
Published on

ಬ್ಯಾಡಗಿ: ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿದ್ದಲ್ಲಿ ಯಶಸ್ವಿ ಜೀವನ ನಡೆಸಲು ಸಾಧ್ಯವಾಗಲಿದೆ. ಮಾನಸಿಕ ನೆಮ್ಮದಿಗೆ ಕೆಲ ನಿಯಮಗಳನ್ನು ರೂಢಿಸಿಕೊಳ್ಳಬೇಕಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಅಮೂಲ್ ಹಿರೆಕುಡೆ ಹೇಳಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ನ್ಯಾಯಾಲಯ ಸಭಾಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ತಾಲೂಕು ಆರೋಗ್ಯ ಇಲಾಖೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ದೈಹಿಕ ಸದೃಢತೆಯೊಂದಿಗೆ ಮಾನಸಿಕ ಆರೋಗ್ಯವೂ ಪ್ರಮುಖವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಹಾಗೂ ಜೀವನಶೈಲಿಯ ಬದಲಾವಣೆಯಿಂದಾಗಿ ಮಾನಸಿಕ ಖಿನ್ನತೆ ಹೆಚ್ಚಾಗುತ್ತಿದ್ದು, ಇದಕ್ಕೆ ನಿಯಂತ್ರಣ ಹಾಕಬೇಕಿದೆ. ಪ್ರತಿಯೊಬ್ಬರೂ ಪ್ರಾಣಾಯಾಮ, ಯೋಗ ಹಾಗೂ ಕ್ರೀಡೆಗಳಲ್ಲಿ ತೊಡಗಬೇಕಿದೆ ಎಂದರು.

ಮನೋರೋಗ ತಜ್ಞ ಡಾ.ವಿಜಯಕುಮಾರ ಬಳೆಗಾರ ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎನ್.ರ್ಬಾ ಅಧ್ಯಕ್ಷತೆ ವಹಿಸಿದ್ದರು.

ಕಿರಿಯ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ, ಸರ್ಕಾರಿ ಅಭಿಯೋಜಕ ರಾಜಣ್ಣ ನ್ಯಾಮತಿ, ಕೆ.ಆರ್. ಲಮಾಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ, ಪ್ರಶಾಂತ ಎಂ.ಎನ್., ಡಾ.ಸಂತೋಷ ಹಾಲುಂಡಿ, ಮಮತಾ ವಿ., ವಕೀಲರಾದ ಎಂ.ಪಿ. ಹಂಜಿಗಿ. ಪಿ.ಸಿ. ಸೀಗಿಹಳ್ಳಿ, ಬಿ.ಎಸ್. ಚೂರಿ, ಎಫ್.ಎಂ. ಮುಳುಗುಂದ, ಆರ್.ವಿ. ಬೆಳಕೇರಿಮಠ, ಎಂ.ಜೆ. ಮುಲ್ಲಾ, ಭಾರತಿ ಕುಲಕರ್ಣಿ, ಎಚ್.ಜಿ. ಮುಳುಗುಂದ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net