ಕೊಲ್ಕತ್ತಾಗೆ ಪ್ರಯಾಣ ಬೆಳೆಸಿದ ಕಾರ್ಯಕರ್ತರು

suci
Published on

ಹುಬ್ಬಳ್ಳಿ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಆ. 5ರಂದು ಆಯೋಜಿಸಿರುವ ಎಸ್​ಯುುಸಿಐ (ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಸಂಸ್ಥಾಪಕ ಶಿವದಾಸ್ ಘೊಷ್ ಅವರ ಜನ್ಮ ಶತಮಾನೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಲು ಧಾರವಾಡ ಜಿಲ್ಲೆಯ ಕಾರ್ಯಕರ್ತರು ಗುರುವಾರ ಹುಬ್ಬಳ್ಳಿಯಿಂದ ಅಮರಾವತಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು.

ಎಸ್​ಯುುಸಿಐ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಬಡಿಗೇರ, ಭುವನಾ, ಭವಾನಿ ಶಂಕರ ಗೌಡ, ದೀಪಾ ಧಾರವಾಡ, ಮಧುಲತಾ ಗೌಡರ್, ಇತರರು ಇದ್ದರು.

ಕಾರ್ಯಕ್ರಮದಲ್ಲಿ ದೇಶದ ವಿವಿಧೆಡೆಯಿಂದ ರೈತರು, ವಿದ್ಯಾರ್ಥಿಗಳು, ಯುವಕರು ಹಾಗೂ ಮಹಿಳೆಯರು ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಎಸ್​ಯುುಸಿಐ ಪ್ರಧಾನ ಕಾರ್ಯದರ್ಶಿ ಪ್ರವಾಶ ಘೊಷ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು. ಪಾಲಿಟ್ ಬ್ಯೂರೋ ಸದಸ್ಯ ಕರ್ನಾಟಕದ ಕೆ.ರಾಧಾಕೃಷ್ಣ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net