ಹಾಲಿನ ದರ ಏರಿಕೆ ವಿರೋಧಿಸಿ ಮೈಸೂರಿನಲ್ಲಿ ಎಸ್‌ಯುಸಿಐ ಪ್ರತಿಭಟನೆ

ಹಾಲಿನ ದರ ಏರಿಕೆ ವಿರೋಧಿಸಿ ಎಸ್.ಯು.ಸಿ.ಐ ವತಿಯಿಂದ ಮೈಸೂರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಹಾಲಿನ ದರ ಏರಿಕೆ ವಿರೋಧಿಸಿ ಎಸ್.ಯು.ಸಿ.ಐ ವತಿಯಿಂದ ಮೈಸೂರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
Published on: 

ಮೈಸೂರು: ಹಾಲಿನ ದರ ಏರಿಕೆ ವಿರೋಧಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ವತಿಯಿಂದ ನಗರದ ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಹಾಲಿನ ದರ ಏರಿಕೆಯಿಂದ ಸಾಮಾನ್ಯ ಕುಟುಂಬಗಳ ಮೇಲೆ ಆರ್ಥಿಕ ಹೊರೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಹಾಲಿನ ದರ ಹೆಚ್ಚಳ ಮತ್ತಷ್ಟು ಹೊರೆಯಾಗಲಿದೆ. ಹಾಲು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯ ವಸ್ತುವಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅವಶ್ಯಕವಾಗಿದೆ.

ಇಂತಹ ಅಗತ್ಯ ವಸ್ತುವಿನ ಬೆಲೆ ಹೆಚ್ಚಿಸುವುದರಿಂದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗಲಿದೆ. ರೈತರು ಹಾಗೂ ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಬೆಲೆ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಪಕ್ಷದ ಪ್ರಮುಖರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಪಿ.ಎಸ್. ಸಂಧ್ಯಾ, ರವಿ ಹಾಗೂ ಇತರರು ಪಾಲ್ಗೊಂಡಿದ್ದರು.