

ಮಂಗಳೂರು: ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ಕೆಳಕ್ಕೆ ಹಾರಿಬಿದ್ದು ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಕಡಬ ನಿವಾಸಿ ದಿವಾಕರ್(36) ಆತ್ಮಹತ್ಯೆ ಮಾಡಿಕೊಂಡವರು. ಜೂ.30ರಂದು ಅನಾರೋಗ್ಯದಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ವಿಪರೀತ ಮದ್ಯಪಾನ ಮಾಡುತ್ತಿದ್ದು, ಬೆಳಗ್ಗೆ ಏಕಾಏಕಿ ಆಸ್ಪತ್ರೆಯ ಹೊಸ ಬ್ಲಾಕ್ ಕಟ್ಟಡ ಏರಿ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.