

ಮದ್ದೂರು: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದರು.
ಇದೇ ವೇಳೆ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ ಅಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು.
ಸಾರ್ವಜನಿಕರ ಹಾಗೂ ರೈತರ ಕೆಲಸಗಳನ್ನು ಅಧಿಕಾರಿಗಳು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಅನಗತ್ಯವಾಗಿ ವಿಳಂಬ ಮಾಡುವುದು. ಕಚೇರಿಗೆ ಸಾರ್ವಜನಿಕರನ್ನು ಅಲೆಸುವುದರ ಬಗ್ಗೆ ದೂರುಗಳು ಕೇಳಿ ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರ್ ಡಾ.ಸ್ಮಿತಾರಾಮು, ಶಿರಸ್ತೇದಾರ್ ಲಕ್ಷ್ಮೀನರಸಿಂಹ ಇದ್ದರು.