ಮೂಲ ಸೌಲಭ್ಯಕ್ಕೆ ಆಗ್ರಹ; ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

4 smg 7
ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಇನ್ನೊಂದೆಡೆ ಸಾಂಸ್ಕೃತಿಕ ಚಟುವಟಿಕೆಗಳನ್ನೂ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಎದುರು ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹಗಳಿಗೆ ಬಾಗಿಲು ಸರಿಯಿಲ್ಲ. ಪ್ರಾಚಾರ್ಯರ ಕಚೇರಿ ಪಕ್ಕದಲ್ಲಿ ಮಾತ್ರ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇಷ್ಟು ದೊಡ್ಡ ಕ್ಯಾಂಪಸ್‌ನಲ್ಲಿ ಕನಿಷ್ಠ ಮೂರ‌್ನಾಲ್ಕು ಸ್ಥಳಗಳಲ್ಲಾದರೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಎಂದು ಆಗ್ರಹಿಸಿದರು.
ಕಾಲೇಜಿನಲ್ಲಿ ಸಾಹಿತ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿಲ್ಲ. ಹೀಗಾಗಿ ಪ್ರತಿಭಾವಂತರಿಗೆ ಬೇಸರವಾಗಿದೆ. ಹೆಚ್ಚು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಬೇಕೆಂದು ಒತ್ತಾಯಿಸಿದರು. ಬಳಿಕ ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net