ಕಾರಾಗೃಹಕ್ಕೆ ಪೊಲೀಸ್ ಅಧಿಕಾರಿಗಳ ದಿಢೀರ್ ದಾಳಿ, ತಪಾಸಣೆ

Published on

ಮೈಸೂರು: ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ಅವರ ಆದೇಶದ ಮೇರೆಗೆ ನಗರದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಅವರು ದಾಳಿ ನಡೆಸಿ, ಕೆಲ ಆಕ್ಷೇಪಾರ್ಹ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು.
ನಗರ ಪೊಲೀಸ್ ಘಟಕದಿಂದ ಮೈಸೂರು ಕೇಂದ್ರ ಕಾರಗೃಹಕ್ಕೆ ಅನಿರೀಕ್ಷಿತ ಭೇಟಿ ನೀಡಿ ಬಂಧಿಗಳ ಬ್ಯಾರಕ್‌ಗಳು ಮತ್ತು ಕಾರಾಗೃಹದ ಒಳಭಾಗ ತಪಾಸಣೆ ಕೈಗೊಳ್ಳಲಾಯಿತು. ತಪಾಸಣೆ ವೇಳೆ ಚಾಕು, ನಗದು ಹಣ, ಮೊಬೈಲ್ ಚಾರ್ಜರ್‌ಗಳು ಪತ್ತೆಯಾಗಿದ್ದು, ಈ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ವಿಭಾಗದ ಎಸಿಪಿಗಳು, ವಿವಿಧ ಠಾಣೆಗಳ ಪೊಲೀಸ್ ಇನ್‌ಸ್ಪೆಕ್ಟರ್, ಅಧಿಕಾರಿಗಳು ಮತ್ತು ಸಿಬ್ಬಂದಿ, ಕಮಾಂಡೋ ಪಡೆ, ಶ್ವಾನ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net